ನಾಡಹಬ್ಬಕ್ಕೆ ಅದ್ದೂರಿ ಚಾಲನೆ ನೀಡಿದ ಸಾಹಿತಿ ಹಂಪ ನಾಗರಾಜಯ್ಯ
ಮೈಸೂರು: ಚಾಮುಂಡಿಬೆಟ್ಟ ಹಾಗೂ ಮೈಸೂರು ಮಧುವಣಗಿತ್ತಿಯಂತೆ ಸಿದ್ಧವಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾಗೆ ಇವತ್ತು ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಚಾಲನೆ ನೀಡಿದರು. ವೃಶ್ಚಿಕ ಲಗ್ನದ ಶುಭಮುಹೂರ್ತದಲ್ಲಿ ದೇವಿಯ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬಕ್ಕೆ ವೈಭವದ ಚಾಲನೆ ನೀಡಿದ್ದು,
ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ರಾಜ್ಯ ಸರ್ಕಾರದ ಪ್ರತಿನಿಧಿಗಳು, ಸಚಿವರು, ಶಾಸಕರು ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು.