ಮೈಸೂರು ಜಿಲ್ಲಾಧಿಕಾರಿ, ಮೇಯರ್ ಸೇರಿದಂತೆ ಮತ್ತಿತರರು ಯಡಿಯೂರಪ್ಪರನ್ನು ಆಹ್ವಾನಿಸಿದರು.ಇದೇ 29ರಂದು ಬೆಳಗ್ಗೆ 9 ಗಂಟೆಗೆ ನಾಡ ದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಮೈಸೂರು ದಸರಾ ಆರಂಭವಾಗಲಿದೆ.
ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ಇಂದು ಯಡಿಯೂರಪ್ಪನವರನ್ನು ಮೈಸೂರು ಭಾಗದ ಜನಪ್ರತಿನಿಧಿಗಳು, ಸ್ವಾಗತ ಸಮಿತಿ, ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಆಹ್ವಾನಿಸಿದ್ದಾರೆ. ಇದೇ 29ರ ಬೆಳಗ್ಗೆ 9 ಗಂಟೆಗೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು ಅಕ್ಟೋಬರ್ 8ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು.