ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!
ಬೆಂಗಳೂರು: ಪ್ರಸಿದ್ಧ ಕನ್ನಡ ಸಾಹಿತಿ ಮತ್ತು ತತ್ವಜ್ಞಾನಿ ಎಸ್.ಎಲ್. ಭೈರಪ್ಪ ನಿನ್ನೆ(ಸೆಪ್ಟೆಂಬರ್ 24) ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 94 ವರ್ಷದ ಭೈರಪ್ಪ ಅವರು ವಯೋಸಹಜ ಮತ್ತು ಮರುವಿನ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದ ಅವರು, 2023ರಲ್ಲಿ ಪದ್ಮಭೂಷಣ ಪ್ರಶಸ್ತಿ ಸಹ ಪಡೆದಿದ್ದರು.
ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು.
ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. ಮೈಸೂರಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು ಪ್ರಧಾನಿ ಮೋದಿ ಅವರನ್ನು ಬೆಂಬಲಿಸುತ್ತಿದ್ದರು. ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದ್ರೆ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.