ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಳಸ ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನೆರೆ ಸಂತ್ರಸ್ತರು ಪರಿಹಾರಕ್ಕೆ ಅರ್ಜಿ ಸಲ್ಲಿಸುತ್ತಿಲ್ಲ ಎಂಬ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದು, ಇವರೆಲ್ಲ ಎಂತಹ ಸಚಿವರು ಎಂದು ವ್ಯಂಗ್ಯವಾಡಿದ್ದಾರೆ.
ಸರ್ಕಾರಕ್ಕೆ ಪ್ರತಿ ತಿಂಗಳು ತೆರಿಗೆ ಹಣ ಬರುತ್ತಲೇ ಇರುತ್ತದೆ. ಹೀಗಿದ್ದಾಗ ಸರ್ಕಾರದ ಬೊಕ್ಕಸ ಹೇಗೆ ಖಾಲಿಯಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದರೆ 10,000 ಕೋಟಿ ರೂ. ನೆರೆಹಾನಿ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೆ. ಕಳೆದ ಬಾರಿ ಕೊಡಗಿನಲ್ಲಿ ಪ್ರವಾಹದಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿದ್ದೆವು ಎಂದು ತಿಳಿಸಿದ್ದಾರೆ.