ನೂತನ ಉಪ ಮುಖ್ಯಮಂತ್ರಿಯಾಗಿರುವ ಲಕ್ಷ್ಮಣ ಸವದಿಯವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ನನಗೆ ಯಾರೂ ವಿರೋಧಿಗಳಿಲ್ಲ. ರಾಜಕೀಯವಾಗಿ ನನ್ನನ್ನು ಮುಗಿಸುವ ಪ್ರಯತ್ನ ಯಾರೂ ಮಾಡಿಲ್ಲ. ಉಮೇಶ್ ಕತ್ತಿ ಮತ್ತು ಜಾರಕಿಹೊಳಿ ಕುಟುಂಬದ ಜತೆ ನನಗೆ ಯಾವುದೇ ಮನಸ್ಥಾಪವಿಲ್ಲ. ಅವರಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದೇನೆ ಎಂದರು.
ಬಿಜೆಪಿಯಲ್ಲಿ ಎಲ್ಲರೂ ಸಮರ್ಥರಿದ್ದಾರೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುವ ಸಾಮಥ್ರ್ಯವಿದೆ ಮುಖ್ಯಮಂತ್ರಿಗಳು ನನಗೆ ಸಾರಿಗೆ ಇಲಾಖೆ ಜವಾಬ್ದಾರಿ ನೀಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಪುನರುಚ್ಚರಿಸಿದರು.ನನಗೆ ಜೀರೊ ಟ್ರಾಫಿಕ್ ಅವಶ್ಯಕತೆ ಇಲ್ಲ ಎಂದು ಹೇಳಿದರು .