ಹಾವೇರಿ: ನನಗೆ ಕೊಡಬೇಕು ಎಂದು ವಾದ ಮಾಡುತ್ತಿದ್ದೇನೆ. ಸಿಗಲಿಲ್ಲ ಎಂದರೆ ಕಾರ್ಯಕರ್ತರ ಜೊತೆ ಮಾತಾನಾಡುತ್ತೇನೆ. ನನಗೆ ನಂದೇ ಹಾದಿ ಇದೆ ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇನೆ. ಹಾಗೆಂದು ನಾನು ಟಿಕೆಟ್ ಬೆನ್ನತ್ತಿಕೊಂಡು ಹೋಗುವವನಲ್ಲ. ನನಗೆ ಕೊಡಬೇಕು ಎಂದು ವಾದ ಮಾಡುತ್ತಿದ್ದೇನೆ. ಸಿಗಲಿಲ್ಲ ಎಂದರೆ ಕಾರ್ಯಕರ್ತರ ಜೊತೆ ಮಾತಾನಾಡುತ್ತೇನೆ. ನನಗೆ ನಂದೇ ಹಾದಿ ಇದೆ. ಹೆಬ್ಬಾರ್, ಎಸ್.ಟಿ ಸೋಮಶೇಖರ್ ಹಾದಿ ಬೇಕಾಗಿಲ್ಲ ಎಂದಿದ್ದಾರೆ.
ಯಡಿಯೂರಪ್ಪನವರೇ ಕಾಂತೇಶ್ ಜೊತೆ ನಿಂತು ಗೆಲ್ಲಿಸಿಕೊಂಡು ಬರೋದಾಗಿ ಮಾತುಕೊಟ್ಟಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ, ಯಡಿಯೂರಪ್ಪನವರೇ ಆ ಮಾತು ಹೇಳಬೇಕಲ್ವಾ? ಅವರು ಹೇಳಿದರೆ ಆ ಪ್ರಕಾರ ನಡೆದುಕೊಳ್ಳಬೇಕಾಗುತ್ತೆ. ನಮಗೆ ಯಾವ ರೀತಿನೂ ಯಡಿಯೂರಪ್ಪ ಅವರು ಹೇಳಿಲ್ಲ. ನಾನು ಸೋತಿದ್ದೀನಿ, ಅವಕಾಶ ಕೊಡಿ ಗೆಲ್ತೀನಿ ಎಂದು ಕೇಳಿದ್ದೇನೆ. ಕಾಂತೇಶ್ಗೆ ಟಿಕೆಟ್ ಕೊಟ್ಟರೆ ವಿಚಾರ ಮಾಡುತ್ತೇನೆ. ಕಾಂತೇಶ್ ಅವರ ಬಗ್ಗೆ ಮಾತಾಡೋಕೆ ಹೋಗಲ್ಲ, ಕಾಂತೇಶ್ಗೂ ನನಗೂ ಸಂಬಂಧ ಇಲ್ಲ ಎಂದಿದ್ದಾರೆ.
ನಾನು ಟಿಕೆಟ್ ಬೆನ್ನತ್ತಿಕೊಂಡು ಹೋಗುವವನಲ್ಲ: ಬಿಸಿ ಪಾಟೀಲ್
Date:






