ಬೆಂಗಳೂರು: ನಾನು ಡಿಸಿಎಂ ಸ್ಥಾನದ ಆಕಾಂಕ್ಷಿಯೂ ಅಲ್ಲ. ಅದರ ಬಗ್ಗೆ ಆಸೆಯೂ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ನಾನು ಡಿಸಿಎಂ ಸ್ಥಾನದ ಆಕಾಂಕ್ಷಿಯೂ ಅಲ್ಲ. ಅದರ ಬಗ್ಗೆ ಆಸೆಯೂ ಇಲ್ಲ. ಕೊಟ್ಟಿರುವ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೇಗುತ್ತೇನೆ. ಹೆಚ್ಚುವರಿ ಡಿಸಿಎಂಗಳ ಬಗ್ಗೆ ಸಿಎಂ, ಕೆಪಿಸಿಸಿ ಅಧ್ಯಕ್ಷರು ಹಾಗೂ ಹೈಕಮಾಂಡ್ಗೆ ಬಿಟ್ಟಿರುವ ವಿಚಾರ. ಸಿಎಂ, ಡಿಸಿಎಂ ಹುದ್ದೆ ಖಾಲಿ ಇಲ್ಲ ಎಂದರು.
ಇನ್ನೂ ಮುಡಾ ನಿವೇಶನ ಹಂಚಿಕೆಗೆ 50:50 ಅನುಪಾತದ ಆದೇಶ ಮಾಡಿದ್ದು, ಈಗ ನಮ್ಮ ಸರ್ಕಾರ ಅಲ್ಲ. ಯಾರ ಕಾಲದಲ್ಲಿ ಸೈಟುಗಳು ಹಂಚಿಕೆ ಆಗಿವೆ?. ಬಿಜೆಪಿ ಕಾಲದಲ್ಲಿ ಒಂದಾದರೂ ಸಿಬಿಐಗೆ ನೀಡಿದ ಉದಾಹರಣೆ ಇದೆಯಾ?. ತನಿಖೆ ನಡೆಯುತ್ತಿದೆ, ತನಿಖೆ ಆದಮೇಲೆ ಎಲ್ಲ ವಿವರ ಹೊರ ಬರುತ್ತದೆ. ನ್ಯಾಯಯುತವಾಗಿ ಹಂಚಿಕೆ ಮಾಡಿದ್ದಕ್ಕೂ ಸಿಬಿಐಗೆ ನೀಡಿ ಎಂದರೆ ಹೇಗೆ? ಎಂದು ಪ್ರಶ್ನಿಸಿದರು.
ನಾನು ಡಿಸಿಎಂ ಸ್ಥಾನದ ಆಕಾಂಕ್ಷಿಯೂ ಅಲ್ಲ. ಅದರ ಬಗ್ಗೆ ಆಸೆಯೂ ಇಲ್ಲ !
Date: