ಕುಮಾರಸ್ವಾಮಿ ಅವರ ವಿರುದ್ಧ ಹಲವಾರು ಹೇಳಿಕೆಗಳು ರಾಜಕೀಯ ವಲಯದಲ್ಲಿ ಹರಿದಾಡಿತ್ತು ಇದಕ್ಕೆ ಉತ್ತರ ನೀಡಿದ ಅವರು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ನಾನು ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ ಈ ಮಾತನ್ನು ನಾನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ನಾನು ಸಿಎಂ ಆಗಿದ್ದ ವೇಳೆ ಅವರ ಕೈಗೆ ಸಿಗುತ್ತಿರಲಿಲ್ಲ ಎಂದು ದೂರಿದ್ದಾರೆ. ಆದರೆ, ನಾನು ಅವರ ವೈಯಕ್ತಿಕ ಸ್ವಾರ್ಥಕ್ಕೆ ಹಣ ಮಾಡಿಕೊಳ್ಳಲು ಸಹಕಾರ ನೀಡಿಲ್ಲ ಎಂದು ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದ ಕುಮಾರಸ್ವಾಮಿ, ಬಿಜೆಪಿ ಶಾಸಕರೇ ಕುಮಾರಸ್ವಾಮಿ ಸಿಎಂ ಆಗಿದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಹೇಳುತ್ತಾರೆಂದು ಉಲ್ಲೇಖಿಸಿದರು.
ನಾನು ಅಧಿಕಾರದಲ್ಲಿದ್ದಾಗ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ ಹಲವಾರು ರೀತಿಯ ಕೆಲಸಗಳನ್ನು ಮಾಡಿದ್ದೇನೆ. ಆದರೆ ಕೆಲವರು ಬೇಡದ ಹೇಳಿಕೆಗಳನ್ನು ಹೇಳುತ್ತಿದ್ದಾರೆ ಎಂದರು.