ನಾನು ಯಾರಿಂದಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ: ಸಚಿವ ಕೆಎನ್ ರಾಜಣ್ಣ

Date:

ನಾನು ಯಾರಿಂದಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ: ಸಚಿವ ಕೆಎನ್ ರಾಜಣ್ಣ

ಬೆಂಗಳೂರು: ನಾನು ಯಾರಿಂದಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಎಐಸಿಸಿ ಹೆಸರನ್ನ ಅವರು ದುರ್ಬಳಕೆ ಮಾಡಿಕೊಳ್ಳಬಾರದು. ಅವರು ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಅದು ಆರೋಪ ಅಲ್ಲ, ವಾಸ್ತವ. ನಾನು ಯಾರಿಂದಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ ಎಂದು ರಾಜಣ್ಣ ಖಡಕ್ ಆಗಿ ಹೇಳಿದರು.
50 ವರ್ಷಗಳಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನಾನು ಸತ್ಪರಿಣಾಮ ಬೀರುವಂಥ ಮಾತನಾಡುತ್ತೇನೆಯೇ ಹೊರತು ದುಷ್ಪರಿಣಾಮ‌ ಬೀರುವಂತಹ ಮಾತುಗಳನ್ನು ಆಡುವುದಿಲ್ಲ. ನನಗೂ ಡಿಕೆ ಶಿವಕುಮಾರ್ಗೂ ವೈಯುಕ್ತಿಕವಾಗಿ ಏನೂ ಇಲ್ಲ. ವಿಚಾರ ಬೇಧ ಇರಬಹುದು ಅಷ್ಟೆ.
ವಿಧಾನಸೌಧಕ್ಕೆ ನಾನು ಒಂದು ರಸ್ತೆಯಲ್ಲಿ ಹೋಗೋಣ ಅಂದರೆ, ಅವರು ಮತ್ತೊಂದು ರಸ್ತೆಯಲ್ಲಿ ಹೋಗೋಣ ಎನ್ನಬಹುದು. ನಾನು ಅವರು ಸಾಕಷ್ಟು ವರ್ಷದ ಸ್ನೇಹಿತರು. ಒಟ್ಟಿಗೆ ವಿದೇಶ ಪ್ರವಾಸ ಎಲ್ಲ ಮಾಡಿದ್ದೇವೆ. ವಿಚಾರ ಭೇದ ಅಷ್ಟೆ, ವೈಯುಕ್ತಿಕವಾಗಿ ಏನೂ ಇಲ್ಲ. ಅವರನ್ನು ಮನೆಗೆ ಒಂದು ದಿನ ಊಟಕ್ಕೆ ಕರೆಯುತ್ತೇನೆ ಎಂದು ರಾಜಣ್ಣ ಹೇಳಿದರು.

Share post:

Subscribe

spot_imgspot_img

Popular

More like this
Related

ರಾಜ್ಯ ಸಾರಿಗೆ ಸಂಸ್ಥೆಗಳಲ್ಲಿ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಅನುಷ್ಠಾನಕ್ಕೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯ ಸಾರಿಗೆ ಸಂಸ್ಥೆಗಳಲ್ಲಿ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಅನುಷ್ಠಾನಕ್ಕೆ ಸಚಿವ ಸಂಪುಟ...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.!

ಹೊಸಕೋಟೆ ಸಮೀಪ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.! ಹೊಸಕೋಟೆ:...

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...