ನಾನು ಯಾರ ಪರವೂ ಅಲ್ಲ,ವಿರೋದವೂ ಅಲ್ಲ.ನಾನು ಕಾಂಗ್ರೆಸ್ ಪಕ್ಷದ ಪರ: ಸಂತೋಷ್ ಲಾಡ್
ಗದಗ: ನಾನು ಯಾರ ಪರವೂ ಅಲ್ಲ,ವಿರೋದವೂ ಅಲ್ಲ.ನಾನು ಕಾಂಗ್ರೆಸ್ ಪಕ್ಷದ ಪರ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಗದಗ ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,
ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜಣ್ಣ ವಿಚಾರ ಅವರವರಿಗೆ ಬಿಟ್ಟಿದ್ದಾಗಿದೆ.ಯಾರೂ ಹೊಸ ಸಿಎಂ ವಿಚಾರವನ್ನು ತೇಲಿಬಿಟ್ಟಿದ್ದಾರೆಯೋ ಅವರನ್ನೇ ಸುದ್ದಿಗಾರರು ಪ್ರಶ್ನಿಸಬೇಕೇ ಹೊರತು ನನ್ನನ್ನಲ್ಲ.ನನಗೆ ಸಂಬಂಧವಿಲ್ಲದ ಅಥವಾ ತಿಳಿಯದೇ ಇರುವ ವಿಚಾರದ ಬಗ್ಗೆ ಮಾತನಾಡುವುದು ಸೂಕ್ತವಲ್ಲ.
ನಾನು ಯಾರ ಪರವೂ ಅಲ್ಲ,ವಿರೋದವೂ ಅಲ್ಲ.ನಾನು ಕಾಂಗ್ರೆಸ್ ಪಕ್ಷದ ಪರ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸಂತೋಷ್ ಲಾಡ್ ಉತ್ತರಿಸಿದರು.
ಕುಂಭಮೇಳದಲ್ಲಿ ಎಷ್ಟೊಂದು ಜನರ ಸಾವಾಗಿದೆ.ಸಾವಿರಾರು ಜನರಿಗೆ ಅನಾನುಕೂಲವಾಗಿದೆ.ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ನೆರವಾಗುವಂತೆ ಸುದ್ದಿಗಾರರು ಕೇಂದ್ರವನ್ನು ಪ್ರಶ್ನೆ ಮಾಡಬೇಕು ಎಂದರು.