ನಾನು ಯಾವ ರೀತಿ ವಿಷ ಹಾಕಿದೆ ಎಂದು ಅವರು ಹೇಳಬೇಕಲ್ಲವೇ?

0
15

ರಾಮನಗರ: ಜೆಡಿಎಸ್ ಪಕ್ಷ ಇದ್ದರೂ ಗೌಡರ ಅಳಿಯನನ್ನು ದಳದಿಂದ ಯಾಕೆ ನಿಲ್ಲಿಸಲಿಲ್ಲ. ಅವರ ಪಕ್ಷ ಹಾಗೂ ಚಿಹ್ನೆಗೆ ಶಕ್ತಿ ಇಲ್ಲವೇ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಮಾಗಡಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಂಸದರಾಗಿದ್ದಾರೆ, 2 ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ತಂದೆ ಒಮ್ಮೆ ಮುಖ್ಯಮಂತ್ರಿ, ಒಮ್ಮೆ ಪ್ರಧಾನಿಯಾಗಿದ್ದಾರೆ. ಈ ಭಾಗದ ಜನ ದೇವೇಗೌಡರು, ಅವರ ಮಗ ಹಾಗೂ ಸೊಸೆಗೆ ಅಧಿಕಾರ ಕೊಟ್ಟಿದ್ದಾರೆ. ಈಗ ಅಳಿಯನನ್ನು ಕರೆದುಕೊಂಡು ಬಂದಿದ್ದಾರೆ. ಜೆಡಿಎಸ್ ಪಕ್ಷ ಇದ್ದರೂ ಗೌಡರ ಅಳಿಯನನ್ನು ದಳದಿಂದ ಯಾಕೆ ನಿಲ್ಲಿಸಲಿಲ್ಲ. ಅವರ ಪಕ್ಷ ಹಾಗೂ ಚಿಹ್ನೆಗೆ ಶಕ್ತಿ ಇಲ್ಲವೇ?. ಇನ್ನು ಕುಮಾರಸ್ವಾಮಿ ಇಲ್ಲಿನ ಜನರನ್ನು ಬಿಟ್ಟು ಮಂಡ್ಯದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ‌ ಎಂದು ಹೇಳಿದರು.
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜಾತ್ಯತೀತ ತತ್ವದ ಮೇಲೆ ನಾವು ಜೆಡಿಎಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿ ಎಲ್ಲರ ವಿರೋಧದ ನಡುವೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಆದರೆ ಅದನ್ನು ಉಳಿಸಿಕೊಳ್ಳಲು ಕುಮಾರಸ್ವಾಮಿ ಅವರಿಂದ ಸಾಧ್ಯವಾಗಲಿಲ್ಲ. ಕುಮಾರಸ್ವಾಮಿ ಅವರು ತಮ್ಮ ಬೆನ್ನಿಗೆ ಚೂರಿ ಹಾಕಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ ನಾಯಕರನ್ನು ಕರೆದುಕೊಂಡು ನಮ್ಮ ಆದಿ ಚುಂಚನಗಿರಿ ಮಠಕ್ಕೆ ಕರೆದುಕೊಂಡು ಹೋಗಿದ್ದಾರೆ. ನಾನು ವಿಷ ಹಾಕಿದೆ ಎಂದು ಹೇಳುತ್ತಿದ್ದಾರೆ. ನಾನು ಯಾವ ರೀತಿ ವಿಷ ಹಾಕಿದೆ ಎಂದು ಅವರು ಹೇಳಬೇಕಲ್ಲವೇ? ಎಂದು ಪ್ರಶ್ನಿಸಿದರು.