No menu items!
10.3 C
Munich
Saturday, September 12, 2026

ನಾನು ರಾಜರೋಷವಾಗಿ ಡಿ.ಕೆ.ಶಿ ಮನೆಗೆ ಬಂದು ಹೋಗುತ್ತಿದ್ದೇನೆ !

Must read

ಬೆಂಗಳೂರು: ಸ್ವಲ್ಪ ಜನ ಮಾಧ್ಯಮದ ಕಣ್ಣು ತಪ್ಪಿಸಿ ಡಿ.ಕೆ.ಶಿವಕುಮಾರ್ ಮನೆಗೆ ಹೋಗುತ್ತಾರೆ ಎಂದು ಯಶವಂತಪುರದ ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್ ಹೇಳಿದರು. ಸದಾಶಿವನಗರದ ಡಿಕೆಶಿ ನಿವಾಸದ ಬಳಿ ಮಾತನಾಡಿದ ಅವರು, ಹೊಸ ವರ್ಷದ ಶುಭಾಶಯ ಹೇಳಲು ಬಂದಿದ್ದೆ. ನಿಮ್ಮ ನೇತೃತ್ವದಲ್ಲಿ ಬೆಂಗಳೂರು ಅಭಿವೃದ್ದಿ ಆಗಲಿ ಅಂತ ಹೇಳಿದೆ ಎಂದರು.
ನಮ್ಮ ಕ್ಷೇತ್ರದ ಬಗ್ಗೆ ಒಂದು ಮನವಿ ಇತ್ತು ಹಾಗಾಗಿ ಬಂದಿದ್ದೆ. ಕೆಲ ಬಿಜೆಪಿ ಶಾಸಕರು ರಾತ್ರಿ ಬರುತ್ತಾರೆ. ಮತ್ತೊಂದಿಷ್ಟು ಜನ ಮಾಧ್ಯಮದ ಕಣ್ಣು ತಪ್ಪಿಸಿ ಹೋಗುತ್ತಾರೆ. ನಾನು ರಾಜರೋಷವಾಗಿ ಬಂದು ಹೋಗುತ್ತಿದ್ದೇನೆ. ಕೆಲವರ ಹಾಗೆ ಕತ್ತಲಲ್ಲಿ ಬಂದು ಹೋಗಲ್ಲ. ನಾನಿದ್ದಾಗಲೂ ಸಾಕಷ್ಟು ಜನ ಬರುತ್ತಿದ್ದರು. ಆದರೆ ನೀವು ಅವರನ್ನು ಗಮನಿಸುವುದಿಲ್ಲ, ಯಶವಂತಪುರ ಶಾಸಕರನ್ನು ಮಾತ್ರ ಗಮನಿಸುತ್ತೀರಿ ಎಂದು ಪ್ರತಿಕ್ರಿಯಿಸಿದರು.

- Advertisement -spot_img

More articles

- Advertisement -spot_img

Latest article