ಸಚಿವ ಸ್ಥಾನ ನೀಡುವಂತೆ ಒತ್ತಡ ಹಾಕಿದ ವಚನಾನಂದ ಸ್ವಾಮೀಜಿ ಅವರಿಗೆ ಬೆದರಿಕೆ ಹಾಕಬೇಡಿ ತಾವು ರಾಜೀನಾಮೆ ನೀಡಲು ಕೂಡ ಸಿದ್ಧವಾಗಿರುವುದಾಗಿ ಯಡಿಯೂರಪ್ಪ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಇಂತಹ ಹೇಳಿಕೆ ನೀಡುವ ಮೂಲಕ ಯಡಿಯೂರಪ್ಪ ತಾವು ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇನ್ನು ಧಾರ್ಮಿಕ ಮುಖಂಡರು ಜಾತಿ ಹೆಸರಲ್ಲಿ ಬೆದರಿಕೆ ಹಾಕದಂತೆ ಹೇಳಿದ್ದಾರೆ. ಇದೇ ವೇಳೆ ಅವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವವರಿಗೆ ಸಂದೇಶ ನೀಡಿದ್ದಾರೆ. ರಾಜೀನಾಮೆಗೆ ಸಿದ್ಧ ಎಂದು ಹೇಳುವ ಮೂಲಕ ಸಂಪುಟ ವಿಸ್ತರಣೆಗೆ ತಡೆ ನೀಡಿರುವ ಮತ್ತು ಭೇಟಿಗೆ ಅವಕಾಶ ನೀಡದ ಪಕ್ಷದ ವರಿಷ್ಠರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.