ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ ಅವರು ಬೆಂಗಳೂರಿಗೆ ಬಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್ ರೇವಣ್ಣ ಕ್ಷಮೆ ಕೇಳಿದ್ದಾರೆ. ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ವಿದೇಶದಲ್ಲೊ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬರೋಬ್ಬರಿ ಒಂದು ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ.
ನಾನು ರಾಜ್ಯಕ್ಕೆ ಬರ್ತೀನಿ ಎಂದ ಸಂಸದ ಪ್ರಜ್ವಲ್
Date:






