ನಾನು ರಾಜ್ಯಾಧ್ಯಕ್ಷರ ರೇಸ್ ನಲ್ಲಿಲ್ಲ: ವಿಪಕ್ಷ ನಾಯಕ ಆರ್ ಅಶೋಕ್

Date:

ನಾನು ರಾಜ್ಯಾಧ್ಯಕ್ಷರ ರೇಸ್ ನಲ್ಲಿಲ್ಲ: ವಿಪಕ್ಷ ನಾಯಕ ಆರ್ ಅಶೋಕ್

ನವದೆಹಲಿ:- ನಾನು ರಾಜ್ಯಾಧ್ಯಕ್ಷರ ರೇಸ್ ನಲ್ಲಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ನೇಮಿಸುವ ಬಗ್ಗೆ ದೆಹಲಿಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಬೇರೆ ರಾಜ್ಯಗಳ ಅಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕರ್ನಾಟಕದ ಬಗ್ಗೆ ಈವರೆಗೂ ಪ್ರಸ್ತಾಪ ಕೇಳಿ ಬಂದಿಲ್ಲ. ಈ ಬಗ್ಗೆ ಚರ್ಚಿಸಲು ನಾನು ದೆಹಲಿಗೆ ಬಂದಿಲ್ಲ, ನಾನು ಆ ರೇಸ್‌ನಲ್ಲಿಲ್ಲ ಎಂದರು.

ನಮ್ಮ ರಾಜ್ಯಾಧ್ಯಕ್ಷರ ಬಗ್ಗೆ ಚರ್ಚೆ ನಡೆದಿಲ್ಲ. ಆ ಬಗ್ಗೆ ಚರ್ಚಿಸಲು ನಾನು ಬಂದಿಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ಬಂದು ರಾಜ್ಯದಲ್ಲಿ ನಡೆಯುವ ಬೆಳವಣಿಗೆ ಬಗ್ಗೆ ಮಾಹಿತಿ ನೀಡಲು ಸೂಚಿಸಿದ್ದರು. ಅದರಂತೆ ನಾನು ಮಾಹಿತಿ ನೀಡಲು ಬಂದಿದ್ದೇನೆ ಎಂದರು.

ನಮ್ಮ ವರಿಷ್ಠರ ಜೊತೆಗೆ ಸುಧೀರ್ಘ ಮಾತುಕತೆ ನಡೆಸಿದ್ದೇನೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಗೊಂದಲ, ಶಾಸಕರ ಹೇಳಿಕೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ನಾವು ಹೋರಾಟ ಮಾಡುತ್ತಿದ್ದೇವೆ, ನಮ್ಮ ಹೋರಾಟದಿಂದ ಸಚಿವರೊಬ್ಬರು ರಾಜೀನಾಮೆ ನೀಡಿದರು. ಸಿಎಂ ಸಿದ್ದರಾಮಯ್ಯ ಸೈಟ್ ವಾಪಸ್ ನೀಡಿದರು. ಸರ್ಕಾರದ ವಿರುದ್ಧ ಹೋರಾಟ ಮಾಡಲು ನಮಗೆ ಮಾರ್ಗದರ್ಶನ ಮಾಡುತ್ತಾರೆ, ಹೋರಾಟದಲ್ಲಿ ಹಿಂದೆ ಉಳಿಯುವ ಪ್ರಶ್ನೆಯೇ ಇಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನವದೆಹಲಿ: ಇಂದು ಮುಖ್ಯಮಂತ್ರಿ ಸ್ಥಾನಕ್ಕೆ...

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ವಿಧಿಸಿದ ‘ICT’

ಬಾಂಗ್ಲಾ ಹಿಂಸಾಚಾರದ ಪ್ರಕರಣ: ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ರಿಲೀಫ್; ಗಡಿಪಾರು ಆದೇಶ ರದ್ದು ಬೆಂಗಳೂರು: ಮಹೇಶ್...

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42 ಭಾರತೀಯರು ಸಾವು

ಮೆಕ್ಕಾ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ ಗೆ ಡಿಕ್ಕಿ: 42...