ನಾನು ಸಿಎಂ ಆಗಿದ್ದಕ್ಕೇ ಅಂಬಿ ಸ್ಮಾರಕ ಆಗಿದ್ದು : ಕುಮಾರಸ್ವಾಮಿ

Date:

ಮಂಡ್ಯ: ನಾನು ಸಿಎಂ ಆಗಿದ್ದಕ್ಕೆ ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತಂದು, ಅವರಿಗೆ ಸ್ಮಾರಕ ನಿರ್ಮಾಣ ಮಾಡಿದೆ. ಅದೇ ಬಿಜೆಪಿ ಸರ್ಕಾರ ವಿಷ್ಣುವರ್ಧನ್ ಅವರಿಗೆ ಏನು ಮಾಡಿದರೆಂದು ನೋಡಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಗ್ರಾಮದಲ್ಲಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಕ್ಕೆ ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯಗೆ ತಂದು ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟೆ, ಬೆಂಗಳೂರಿನಲ್ಲಿ ಅಂಬರೀಶ್ ಅವರ ಸಮಾಧಿಗೆ ಜಾಗ ನೀಡಿದೆ. ಆದರೆ ವಿಷ್ಣುವರ್ಧನ್ ಅವರು ನಿಧನರಾದಾಗ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿದೆ ಎನ್ನುವುದು ಎಲ್ಲರಿಗೂ ಗೋತ್ತು. ಇಂದಿಗೂ ಸಹ ವಿಷ್ಟುವರ್ಧನ್ ಅವರಿಗೆ ಸರಿಯಾಗಿ ಸ್ಮಾರಕ ಕಟ್ಟಲು ಆಗಿಲ್ಲ. ಇದನ್ನು ಸುಮಲತಾ ಅವರು ಅರ್ಥ ಮಾಡಿಕೊಳ್ಳಬೇಕು. ಈ ರೀತಿ ಮಣ್ಣಾಗಿ ಹೋಗುತ್ತಾರೆ ಎಂದು ಹೇಳಲು ಹೋಗಬಾರದು ಎಂದರು.
ನಾನು ಸಿಎಂ ಆಗಿದ್ದ ವೇಳೆಯಲ್ಲಿ ಯಾವುದೇ ಅಕ್ರಮ ಗಣಿಗಾರಿಗೆ ಅನುಮತಿ ನೀಡಿರಲಿಲ್ಲ. ಬೇಬಿ ಬೆಟ್ಟದಲ್ಲಿ ಸಂಪೂರ್ಣ ಗಣಿಗಾರಿಕೆಯನ್ನು ನಿಷೇಧ ಮಾಡಿದ್ದೆ. ಸುಮ್ಮನೆ ಆರೋಪಗಳನ್ನು ನನ್ನ ಮೇಲೆ ಮಾಡಬಾರದು. ಕೆಆರ್‍ಎಸ್ ಅಣೆಕಟ್ಟೆ ಇನ್ನೂ 100 ವರ್ಷವಾದರೂ ಏನೂ ಆಗಲ್ಲ, ಸುಭದ್ರವಾಗಿ ಇರುತ್ತದೆ ಯಾರು ಏನೇನೋ ಹೇಳಬಾರದು ಎಂದು ಸುಮಲತಾ ಅವರಿಗೆ ಕುಮಾರಸ್ವಾಮಿ ಟಾಂಗ್ ನೀಡಿದರು.
ಸುಮಲತಾ ಅವರ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು ಸುಧೀರ್ಘವಾಗಿ ಮಾತನಾಡಿದ್ದಾರೆ. ನನ್ನ ತೇಜೋವಧೆ ಮಾಡಿದರು ಸಹ ಯಾರೂ ನನ್ನ ಮುಗಿಸಲು ಸಾಧ್ಯವಿಲ್ಲ. ನಾವು ಸದಾ ಜನರು ಮತ್ತು ರೈತರ ಪರವಾಗಿ ಇರುತ್ತೇನೆ, ಜನರ ಆಶೀರ್ವಾದ ನನ್ನ ಮೇಲೆ ಇದೆ ಎಂದು ಕುಮಾರಸ್ವಾಮಿ ಹೇಳಿದರು.
ಜಿ.ಮಾದೇಗೌಡರ ಆರೋಗ್ಯ ವಿಚಾರಿಸಿದ ಹೆಚ್‍ಡಿಕೆ ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ.ಮಾದೇಗೌಡ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಜಿ.ಮಾದೇಗೌಡ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಸದ್ಯ ಜಿ.ಮಾದೇಗೌಡರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಕುಮಾರಸ್ವಾಮಿ ಅವರು ಮಾದೇಗೌಡರನ್ನು ನೋಡಿ, ಬಳಿಕ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂದು ವೈದ್ಯರ ಬಳಿ ಮಾಹಿತಿಯನ್ನು ಪಡೆದುಕೊಂಡರು.


ಬಳಿಕ ಮಾತನಾಡಿದ ಕುಮಾರಸ್ವಾಮಿ, ಮಾದೇಗೌಡರ ಆರೋಗ್ಯದಲ್ಲಿ ಸ್ವಲ್ಪ ಹೇರುಪೇರಾಗಿದೆ. ಅವರ ಆರೋಗ್ಯ ಸರಿಪಡಿಸಲು ವೈದ್ಯರು ಸಹ ಚಿಕಿತ್ಸೆ ಮುಂದುವರೆಸುತ್ತಿದ್ದಾರೆ. ಮಾದೇಗೌಡರು ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಹಾಗೂ ಕಾವೇರಿ ವಿಚಾರದಲ್ಲಿ ಸಾಕಷ್ಟು ಹೋರಾಟ ನಡೆಸಿದ್ದಾರೆ. ಇಂತಹ ವ್ಯಕ್ತಿ ಆದಷ್ಟು ಬೇಗ ಗುಣಮುಖರಾಗಬೇಕು. ಅವರು ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಭಗವಂತನಲ್ಲಿ ಪಾರ್ಥನೆ ಮಾಡುತ್ತೇನೆ ಎಂದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...