ಸಿದ್ದರಾಮಯ್ಯ ಬೆಂಬಲದಿಂದ ನಾನು ಮುಖ್ಯಮಂತ್ರಿ ಆಗಿಲ್ಲ. ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಮುಖ್ಯಮಂತ್ರಿ ಮಾಡಿತ್ತು ಎಂದರು.ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರೆ, ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ?’ ಎಂದು ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.ಸಿದ್ದರಾಮಯ್ಯ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾಗ ನನ್ನ ಮನೆ ದುಡ್ಡು ಹಾಕಿದ್ದೇನೆ.
ಅವರ ಪರವಾಗಿ ಬ್ಯಾನರ್ ಹಾಕಿಸಿದ್ದೇನೆ. ನಾನು ತಂದ ಹಣ ದೇವೇಗೌಡರ ದುಡ್ಡಲ್ಲ. ಕಾಂಗ್ರೆಸ್ ಅವರು ನನ್ನನ್ನ ಬಳಸಿಕೊಂಡು ಬಿಸಾಕಿದರು. ನಾನು ಯಾರನ್ನು ಬಳಸಿಕೊಂಡು ಬಿಸಾಕಿಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.