ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಸುವರ್ಣಸೌಧ ಉದ್ಘಾಟನೆ ಆಗಿದೆ !

0
33

ಬೆಳಗಾವಿ: ನಾನು ನಿಗದಿ ಮಾಡಿದ್ದ ಸ್ಥಳದಲ್ಲಿ ಸುವರ್ಣಸೌಧ ನಿರ್ಮಾಣ ಆಯಿತು. ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಸುವರ್ಣಸೌಧ ಉದ್ಘಾಟನೆ ಆಗಿದೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ನನಗೆ ಹೊಸದು ಅಲ್ಲ, 30 ವರ್ಷಗಳ ಸಂಬಂಧ ಇದೆ. ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಕೊವಿಡ್, ಪ್ರವಾಹ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೆಲಸ ಮಾಡಿದ್ದೇನೆ. ನಾನು ನಿಗದಿ ಮಾಡಿದ್ದ ಸ್ಥಳದಲ್ಲಿ ಸುವರ್ಣಸೌಧ ನಿರ್ಮಾಣ ಆಯಿತು. ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಸುವರ್ಣಸೌಧ ಉದ್ಘಾಟನೆ ಆಗಿದೆ ಎಂದರು.
ಸಣ್ಣ ಪುಟ್ಟ ಸಮಸ್ಯೆಯನ್ನು ಇತ್ಯರ್ಥಕ್ಕೆ ಪ್ರಯತ್ನ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಆರಂಭ ಮಾಡಿದ್ದೇವೆ. ಜಗದೀಶ್ ಶೆಟ್ಟರ್ ಹೊರಗಿನವರು ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ, ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ ನನ್ನ ಕರ್ಮ ಭೂಮಿ ಎಂದರು. ಬೆಳಗಾವಿಯಲ್ಲೇ ನಾನು ಮನೆಯನ್ನು ಮಾಡಿ ವಾಸ ಮಾಡುತ್ತೇನೆ ಎಂದರು.
ಧಾರವಾಡದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಶೆಟ್ಟರ್, ಈಗಾಗಲೇ ಅಭ್ಯರ್ಥಿ ಘೋಷಣೆ ಆಗಿದೆ. ಯಡಿಯೂರಪ್ಪ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ತಪ್ಪು ಗ್ರಹಿಕೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ ಎಂದರು.