ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಾವು ಸಿಎಂ ಆಗುವ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ, ನನಗೆ ಸಿಎಂ ಆಗುವ ಆಸೆ ಇದೆ ಆದರೆ ನಾಳೆಯೇ ಆಗಿಬಿಡುತ್ತೇನೆ ಎಂದು ಹೇಳಿಲ್ಲ ನಾನೇನು ಸನ್ಯಾಸಿ ಅಲ್ಲ ಎಂದು ಹೇಳುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಧಾರವಾಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ನಾನು ಸಿಎಂ ಆದರೆ 10 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತೇನೆ, ಯಾರೂ ಹಸಿವಿನಿಂದ ಇರದಂತೆ ಮಾಡುತ್ತೇನೆ ಎಂದು ಹೇಳುವ ಮೂಲಕ ಎಲ್ಲರಲ್ಲೂ ಅಚ್ಚರಿಯನ್ನು ಮೂಡಿಸಿದ್ರು ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಬಹುದೆಂಬ ಅನುಮಾನ ಮೂಡಿಸಿತ್ತು.
ಈ ಸಮಯದಲ್ಲಿ ಬಿಜೆಪಿಯ ಈಶ್ವರಪ್ಪ ಅವರ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಆತ ಒಬ್ಬ ಪೆದ್ದ ಆತನ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.