No menu items!
20.9 C
Munich
Friday, August 21, 2026

ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ!

Must read

ಮಂಡ್ಯ: ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.


ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಅದೇ ದಿನ ಮಧ್ಯಾಹ್ನದ ವೇಳೆಗೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅಂದು ಸಂಜೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಸೋಮವಾರ ಸಂಜೆ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶವ ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದರು ಎಂಬುದು ತಿಳಿದುಬಂದಿದೆ.

- Advertisement -spot_img

More articles

- Advertisement -spot_img

Latest article