ನಾಮಪತ್ರ ವಾಪಸ್ ಪಡೆದ ಮುದ್ದಹನುಮೇಗೌಡ, ನಿರಾಳರಾದ್ರು ದೇವೇಗೌಡ್ರು..!

admin
By admin
1 Min Read

ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಮುದ್ದಹನುಮೇಗೌಡ ಇಂದು ತಮ್ಮ ನಾಮಪತ್ರ ವಾಪಸ್​ ಪಡೆದಿದ್ದಾರೆ. ಕಾಂಗ್ರೆಸ್​ ನಾಯಕರ ಮನವೊಲಿಕೆ ಬೆನ್ನಲ್ಲೇ ಅವರು ನಾಮಪತ್ರ ಹಿಂಪಡೆದಿದ್ದಾರೆ. ಈ ಮೂಲಕ ದೋಸ್ತಿಪಕ್ಷಗಳ ಸರ್ವಸಮ್ಮತ ಅಭ್ಯರ್ಥಿಯಾಗಿ ಸ್ಪರ್ಧಿಸಿರೋ ಜೆಡಿಎಸ್​​ ವರಿಷ್ಠ ಹೆಚ್.ಡಿ ದೇವೇಗೌಡರ ಹಾದಿ ಸುಗಮವಾಗಿದ್ದು, ಹೆಚ್​ಡಿಡಿ ನಿರಾಳರಾಗಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ವಿರುದ್ಧ ಸೆಡ್ಡು ಹೊಡೆದು, ಕಾಂಗ್ರೆಸ್​ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಹಾಗೂ ಕೆ.ಎನ್ ರಾಜಣ್ಣ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆ ಕೈ ನಾಯಕರು ಗೊಂದಲಕ್ಕೆ ಸಿಲುಕಿದ್ದರು.

ಇನ್ನು ನಾಮಪತ್ರ ವಾಪಸ್​ ಪಡೆಯಬೇಕೋ ಬೇಡವೋ ಎಂಬ ಬಗ್ಗೆ ಇಂದು ಕಾಂಗ್ರೆಸ್​ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಮುದ್ದಹನುಮೇಗೌಡ ಸಭೆ ನಡೆಸಿದ್ದರು.

Share This Article