ಸಚಿವ ಮಾಧುಸ್ವಾಮಿ, ಪತ್ನಿ ದೇವಕಿ ಮತ್ತು ಬಿಜೆಪಿ ಮುಖಂಡರ ಜತೆ ಮೆರವಣಿಗೆಯಲ್ಲಿ ನಾಮಪತ್ರ ಸಲ್ಲಿಸಲು ನಾರಾಯಣಗೌಡ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ ಜೆಡಿಎಸ್‍ನ ಕೆಲವರು ಚಪ್ಪಲಿ ತೂರಿ ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.ನಾಮಪತ್ರ ಸಲ್ಲಿಸಿ ಹೊರಬಂದ ನಾರಾಯಣಗೌಡರನ್ನು ಪೊಲೀಸರು ಕಾರಿನಲ್ಲಿ ಕರೆದೊಯ್ದರು.ಈ ವೇಳೆಯೂ ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ಮತ್ತು ಜೆಡಿಎಸ್ ಬಾವುಟಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡ ಅವರು ನನಗೆ ಜೆಡಿಎಸ್ ಕಾರ್ಯಕರ್ತರು ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಸಚಿವ ಮಾಧುಸ್ವಾಮಿ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಇದರ ಪರಿಣಾಮವನ್ನು ಜೆಡಿಎಸ್ ಅಭ್ಯರ್ಥಿ ದೇವರಾಜು ಅನುಭವಿಸಬೇಕಾಗುತ್ತದೆ ಎಂದು ನಾರಾಯಣಗೌಡ ಕಿಡಿಕಾರಿದರು.