ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ಹೇಳಿದಂತೆ ನಾನು, ಸಿಎಂ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

Date:

ನಾಯಕತ್ವ ವಿಚಾರದಲ್ಲಿ ಹೈಕಮಾಂಡ್ ಹೇಳಿದಂತೆ ನಾನು, ಸಿಎಂ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಬೆಂಗಳೂರು: “ನಾಯಕತ್ವ ವಿಚಾರದಲ್ಲಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯ ಅವರದ್ದು ಒಂದೇ ರಾಜಕೀಯ ನಿಲುವಾಗಿದ್ದು, ಪಕ್ಷದ ವರಿಷ್ಠರು ಹೇಳಿದಂತೆ ನಾವಿಬ್ಬರು ನಡೆಯುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶನಿವಾರ ಉಪಾಹಾರ ಸಭೆ ನಡೆಸಿದ ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

“ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪ್ರಸ್ತುತ ಪರಿಸ್ಥಿತಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷ ಕಷ್ಟದ ಸಮಯದಲ್ಲಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮಹತ್ತರ ಪಾತ್ರ ನಿರ್ವಹಿಸಲಿದೆ. 2028ರ ಚುನಾವಣೆ ನಂತರ 2029ರ ಲೋಕಸಭೆ ಚುನಾವಣೆಯನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಎದುರಿಸುತ್ತೇವೆ. ರಾಜ್ಯದಲ್ಲಿ 2028 ಕ್ಕೆ ಹಾಗೂ 2029ರಲ್ಲಿ ರಾಷ್ಟ್ರ ಮಟ್ಟದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದು, ಮುಂದೆಯೂ ಅದೇ ರೀತಿ ಕೆಲಸ ಮಾಡಲು ಅಚಲ ನಿರ್ಧಾರ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

“ಇಂದು ನಾನು ಹಾಗೂ ಸಿಎಂ ಅವರು ಉಪಹಾರ ಕೂಟದಲ್ಲಿ ಭಾಗವಹಿಸಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಭೋಜನಕೂಟಕ್ಕೆ ಬರಲಿದ್ದಾರೆ. ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಕಾರ್ಯಕರ್ತರ ಪರಿಶ್ರಮ, ಜನರ ಆಶೀರ್ವಾದ, ನಿಮ್ಮೆಲ್ಲರ ಸಹಕಾರದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಕೊಟ್ಟ ಮಾತಿನಂತೆ ಜನರ ಸೇವೆ ಮಾಡುತ್ತಿದ್ದೇವೆ. ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡುತ್ತಿದ್ದಾರೆ. ಜನರ ನಿರೀಕ್ಷೆ, ಆಕಾಂಕ್ಷೆ, ಆಶೋತ್ತರಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದ್ದು, ಹೈಕಮಾಂಡ್ ತೀರ್ಮಾನದಂತೆ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ ಬೆಂಗಳೂರು:...

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...