ಕೆಆರ್ ಪೇಟೆ ಕ್ಷೇತ್ರದ ಗೆಲುವನ್ನು ಪ್ರತಿಷ್ಟೆಯ ಪ್ರಶ್ನೆಯನ್ನಾಗಿಸಿಕೊಂಡಿತ್ತು ಶಾಸಕ ನಾರಾಯಣ ಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು ಆದರೆ ಯಡಿಯೂರಪ್ಪನವರು ತಮ್ಮ ಪುತ್ರ ವಿಜಯೇಂದ್ರರನ್ನೇ ಚುನಾವಣಾ ಉಸ್ತುವಾರಿ ನೋಡಿಕೊಳ್ಳಲು ನೇಮಿಸಿದ್ದರು.
ಆರಂಭದಿಂದಲೂ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದ ವಿಜಯೇಂದ್ರ ಕೊನೆಗೂ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾರಣಕರ್ತರಾಗಿದ್ದಾರೆ. ನಾರಾಯಣಗೌಡರು ಗೆಲುವು ಸಾಧಿಸಿದ್ದಾರೆ ಈ ಗೆಲುವಿನ ಹಿನ್ನಲೆಯಲ್ಲಿ ತಮ್ಮ ತಂದೆ ಯಡಿಯೂರಪ್ಪನವರನ್ನು ಭೇಟಿ ಮಾಡಿದ ವಿಜಯೇಂದ್ರ ಈ ಕುರಿತು ಮಾಹಿತಿ ನೀಡಿದ್ದಾರೆ.