No menu items!
23.4 C
Munich
Saturday, May 2, 2026

ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ

Must read

ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ

ನವದೆಹಲಿ: ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದ ರಾಜಧಾನಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ,
ಊಹಾಪೋಹಗಳಾ ಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇನ್ನೂ ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ , ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.

- Advertisement -spot_img

More articles

- Advertisement -spot_img

Latest article