14 ಶಾಸಕರ ರಾಜೀನಾಮೆಯಿಂದಾಗಿ ಅಲ್ಪಮೊತ್ತಕ್ಕೆ ಕುಸಿದಿರುವ ರಾಜ್ಯ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಎಲ್ಲಾ ರೀತಿಯ ಕಾರ್ಯತಂತ್ರ ನಡೆಸಲಾಗಿದೆ.ಎಲ್ಲವೂ ದೋಸ್ತಿ ನಾಯಕರು ಅಂದುಕೊಂಡಂತೆ ಆಗದಿದ್ದರೆ, ನಾಳೆಯೇ ಸರ್ಕಾರ ಪತನವಾಗಲಿದೆ. ನಾಳೆ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ.
ನಾಳೆ ಶಾಸಕಾಂಗ ಸಭೆ ನಡೆಸಿ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು, ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತನಾಡಿದ್ದು, ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಹುದ್ದೆಗೆ ಕುಮಾರಸ್ವಾಮಿ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಬಹುತೇಕ ನಾಳೆಯೇ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದು, ದೋಸ್ತಿ ಸರ್ಕಾರ ಪತನವಾಗಲಿದೆ ಎಂದು ಹೇಳಲಾಗಿದೆ.