ನಾಳೆ ಈ ಭಾಗಗಳಲ್ಲಿ ಮೆಟ್ರೋ ಸಂಚಾರ ಇರಲ್ಲ

1
42

ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ. ಎಂ. ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ಇರುವುದಿಲ್ಲ.

ಬೆಂಗಳೂರು ಮೆಟ್ರೋ ರೈಲು ನಿಗಮ ಶುಕ್ರವಾರ ಈ ಕುರಿತು ಪ್ರಕಟಣೆ ಹೊರಡಿಸಿದೆ. ಅಕ್ಟೋಬರ್ 9ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 10ರ ಬೆಳಗ್ಗೆ 6 ಗಂಟೆ ತನಕ ಎಂ. ಜಿ. ರಸ್ತೆ-ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ರದ್ದುಗೊಳ್ಳಲಿದೆ ಎಂದು ಮಾಹಿತಿ ನೀಡಿದೆ.

 

ಅಕ್ಟೋಬರ್ 9ರಂದು ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಎಂ. ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ನಡೆಸುವುದಿಲ್ಲ.

 

ಎಂ. ಜಿ. ರಸ್ತೆ-ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ವರೆಗೆ ವಾಣಿಜ್ಯ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಅಕ್ಟೋಬರ್ 10ರ ಭಾನುವಾರ ಬೆಳಗ್ಗೆ 6 ಗಂಟೆ ಬಳಿಕ ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಅವಧಿಯಲ್ಲಿ ನೇರಳೆ ಮಾರ್ಗದಲ್ಲಿ ಎಂ. ಜಿ. ರಸ್ತೆ-ಕೆಂಗೇರಿ ತನಕ ಎಂದಿನಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ. ಹಸಿರು ಮಾರ್ಗದಲ್ಲಿನ ರೈಲು ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಹೇಳಿದೆ. ಬೈಯಪ್ಪನಹಳ್ಳಿ-ಮೈಸೂರು ರಸ್ತೆ (ನೇರಳೆ) ಮಾರ್ಗವನ್ನು ಕೆಂಗೇರಿ ತನಕ ವಿಸ್ತರಣೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭಿಸಲಾಗಿದೆ.

1 COMMENT

LEAVE A REPLY

Please enter your comment!
Please enter your name here