ರೋಷನ್ ಬೇಗ್ ಅವರೇ ಸ್ಪಷ್ಟನೆ ನೀಡಿದ್ದು, ನಾಳೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ರೋಷನ್ ಬೇಗ್ ಹೇಳಿದ್ದಾರೆ.
ಯೆಸ್, ಮೈತ್ರಿಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಮಂಗಳವಾರ ಶಾಸಕ ಸ್ಥಾನಕ್ಕೆ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಲಿರುವುದು ಖಚಿತವಾಗಿದೆ.ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಲಿದ್ದೇನೆ ಎಂದು ರೋಷನ್ ಬೇಗ್ ಅವರೇ ಹೇಳಿದ್ದಾರೆ, ಇನ್ನೂ ಕಾಂಗ್ರೆಸ್ ಸದಸ್ಯ ಸ್ಥಾನಕ್ಕೂ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಲಿದ್ದಾರೆ.