ಮುಖ್ಯಮಂತ್ರಿ ಕುಮಾರಸ್ವಾಮಿ ಬಹುಮತ ಕಳೆದುಕೊಂಡಿದ್ದಾರೆ .ನಾಳೆ ವಿಶ್ವಾಸಮತ ಯಾಚನೆ ಮಾಡಿದರೂ ಪ್ರಯೋಜನವಿಲ್ಲ ನಾಳೆ ರಾಜೀನಾಮೆ ನೀಡಲೇಬೇಕು ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ
ಸುಪ್ರೀಂಕೋರ್ಟ್ ತೀರ್ಪಿನಿಂದ ಅತೃಪ್ತ ಶಾಸಕರಿಗೆ ನೈತಿಕ ಬಲ ಸಿಕ್ಕಂತಾಗಿದೆ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ತೀರ್ಪು ನೀಡಿದೆ. ಇದು ಪ್ರಜಾಪ್ರಭುತ್ವದ ಗೆಲುವು. ಈಗ 15 ಶಾಸಕರಿಗೆ ಸದನಕ್ಕೆ ಹಾಜರಾಗಬೇಕು ಎಂದು ಒತ್ತಾಯ ಮಾಡುವಂತಿಲ್ಲ. ಅವರಿಗೆ ವಿಪ್ ಕೊಡಲಾಗದು. ಶಾಸಕರ ರಾಜೀನಾಮೆ ಕುರಿತು ಸ್ಪೀಕರ್ ಆದಷ್ಟು ಬೇಗ ತೀರ್ಮಾನ ಕೈಗೊಳ್ಳಬೇಕು. ಅಲ್ಲದೆ, ಅವರ ನಿರ್ಧಾರವನ್ನು ತಿಳಿಸಲೂ ಕೋರ್ಟ್ ಹೇಳಿದೆ