ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ ವಿಜಯನಗರ ನೂತನ ಜಿಲ್ಲೆ ರಚನೆ ಮಾಡುವುದು ಯಾವ ಪುರುಷಾರ್ಥಕ್ಕೆ ಎಂಬುದು ತಿಳಿಯುತ್ತಿಲ್ಲ. ನಾವು ಬಿಜೆಪಿಯಿಂದ ಗೆದ್ದಿದ್ದಿವೋ ಅಥವಾ ಇಲ್ಲವೋ ಎಂದು ಅನ್ನಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಜಿಲ್ಲೆಯಲ್ಲಿ ನಾವು ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಗಳು. ಅವರ ಮೇಲೆ ಗೌರವವಿದೆ. ಆದರೆ, ಅವರು ಜಿಲ್ಲೆ ವಿಭಜನೆ ಸಂಬಂಧ ನಮ್ಮ ಅಭಿಪ್ರಾಯವನ್ನು ಕೇಳದೆ ಆತುರದ ತೀರ್ಮಾನ ಕೈಗೊಂಡಿದ್ದಾರೆ ಎಂದು ಹರಪ್ಪನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಜಿ.ಕರುಣಾಕರ ರೆಡ್ಡಿ ಹೇಳಿದ್ದಾರೆ .