ಆಂಧ್ರಪ್ರದೇಶದ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿಯವರನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬಾರಿ ಬಹುಮತದೊಂದಿಗೆ, ಆಂಧ್ರದಲ್ಲಿ ಜಯ ಸಾಧಿಸಿ, ಗದ್ದುಗೆ ಹಿಡಿದ ವೈಎಸ್ ಜಗನ್ ಮೋಹನ್ ರೆಡ್ಡಿಯವರು ಸಿಎಂ ಆದ ನಂತ್ರ, ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ.
ಈ ಮೂಲಕ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ, ಆಡಳಿತ ನಡೆಸುತ್ತಿರುವ ಜಗನ್ ಮೋಹನ್ ರೆಡ್ಡಿಯವರಿಗೆ ಅಭಿನಂದಿಸಿ, ಶುಭಾಷಯ ತಿಳಿಸಿದ್ದಾರೆ.
ಈ ವಿಚಾರವನ್ನು ನಿಖಿಲ್ ಕುಮಾರಸ್ವಾಮಿ ಎಲ್ಲಿಯೂ ಹೇಳಿಕೊಂಡಿಲ್ಲವಾದರೂ, ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರು, ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿ ಅಭಿನಂದಿಸಿದ ಬಗ್ಗೆ ಟ್ವಿಟರ್ ನಲ್ಲಿ ಪೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿನಂದಿಸಿದ ನಿಖಿಲ್ ಕುಮಾರಸ್ವಾಮಿಯವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.