ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವುದು ಫಿಕ್ಸ್!
ಬೆಂಗಳೂರು: ಮೂರು ಕ್ಷೇತ್ರಗಳ ಪೈಕಿ ಹೈವೋಲ್ಟೇಜ್ ಎನಿಸಿರುವ ಚನ್ನಪಟ್ಟಣದ ಕದನ ಮೆಗಾವೋಲ್ಟೇಜ್ಗೆ ತಿರುಗಿದೆ. ಜೆಡಿಎಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗಳು ನಡೆದಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯನ್ನು ಜೆಡಿಎಸ್ ಕಣಕ್ಕೆ ಇಳಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್‌ಡಿದೇವೇಗೌಡ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕುಮಾರಸ್ವಾಮಿಯನ್ನ ಹೇಗಾದ್ರು ಮುಗಿಸಬೇಕು ಅಂತ ಇದೆ.ಚನ್ನಪಟ್ಟಣದ ಕಾರ್ಯಕರ್ತರು, ಜನರು ಇದಕ್ಕೆ ಉತ್ತರ ಕೊಡಬೇಕು. ನಾನೇ ಚನ್ನಪಟ್ಟಣಕ್ಕೆ ಬಂದು ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.