ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ, ಎಚ್ ಡಿ ದೇವೇಗೌಡ, ಅವರ ಸೋಲು ಖಚಿತ ‘ : ಯಡಿಯೂರಪ್ಪ !?

Date:

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ತುಮಕೂರಿನಲ್ಲಿ ಎಚ್.ಡಿ.ದೇವೇಗೌಡರಿಗೆ ಸೋಲು ಕಟ್ಟಿಟ್ಟ ಬುತ್ತಿ. ಜನತೆ ಈ ಮೂವರನ್ನೂ ಸಾರಾ ಸಗಟಾಗಿ ತಿರಸ್ಕರಿಸಲಿದ್ದಾರೆ ಎಂದು ಹೇಳಿದರು.

ಏನೇ ತಂತ್ರ-ಕುತಂತ್ರ ಮಾಡಿದರೂ ಈ ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲು ಸಾಧ್ಯವೇ ಇಲ್ಲ. ಇದರ ಸುಳಿವರಿತೇ ಮುಖ್ಯಮಂತ್ರಿ ಕುಮಾರಸ್ವಾಮಿ ರೆಸಾರ್ಟ್‍ನಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

23ರ ಫಲಿತಾಂಶದ ನಂತರ ಸರ್ಕಾರವನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ತಮ್ಮ ಆಪ್ತರ ಜತೆ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಯಾವ ಕಾರಣಕ್ಕೂ ಫಲಿತಾಂಶದ ಬಳಿಕ ಸರ್ಕಾರ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಗೆಲ್ಲುವುದರಲ್ಲಿ ಯಾವ ಸಂಶಯವೂ ಬೇಡ. ಅಲ್ಲಿ ಹಣಬಲ ಮತ್ತು ಅಧಿಕಾರ ದುರುಪಯೋಗಪಡಿಸಿಕೊಂಡು ಜೆಡಿಎಸ್ ಗೆಲ್ಲಲು ಮುಂದಾಗಿತ್ತು. ಆದರೆ, ಮಂಡ್ಯದ ಸ್ವಾಭಿಮಾನಿ ಜನ ಸುಮಲತಾ ಅವರನ್ನು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...