ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಚಾರಕ್ಕೆ ಆಗಮಿಸಲಿದ್ದಾರೆ.
ಇದರೊಂದಿಗೆ ಮಂಡ್ಯ ಲೋಕಸಭೆ ಕ್ಷೇತ್ರ ಅಖಾಡ ನಾಳೆ ಇನ್ನಷ್ಟು ರಂಗೇರಲಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ, ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಪರವಾಗಿ ಪ್ರಚಾರ ನಡೆಸಲಿದ್ದಾರೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚಂದ್ರಬಾಬು ನಾಯ್ಡು ಮಂಡ್ಯ ಲೋಕಸಭೆ ಕ್ಷೇತ್ರದ ಮೇಲುಕೋಟೆ ಮತ್ತು ಪಾಂಡವಪುರದಲ್ಲಿ ಪ್ರಚಾರ ನಡೆಸಿ ಮತ ಯಾಚಿಸಲಿದ್ದಾರೆ.