ನಿಖಿಲ್ ಸೋತರೆ ಪುಟ್ಟರಾಜು ತಲೆದಂಡ? ಕಾರಣ ಗೊತ್ತಾ ?

Date:

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ಸಚಿವ ಸಂಪುಟ ಪುನರ್​ ರಚನೆಯಾಗಲಿದ್ದು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇ ಆದರೆ ಮೇಲುಕೋಟೆ ಶಾಸಕ ಹಾಗೂ ಸಣ್ಣ ನೀರಾವರಿ ಸಚಿವ ಪುಟ್ಟರಾಜು ತಲೆದಂಡವಾಗುವುದು ಬಹುತೇಕ ಖಚಿತವಾಗಿದೆ.ಜೆಡಿಎಸ್​ ಹಾಗೂ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಾರಿಯ ಮಂಡ್ಯ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು. ತಮ್ಮ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗಾಗಿ ಇನ್ನಿಲ್ಲದಂತೆ ಶ್ರಮಿಸಿದ್ದರು. ಮಂಡ್ಯದಲ್ಲಿ ಏಳು ಶಾಸಕರಿದ್ದರೂ ಸಹ ಮಂಡ್ಯದಲ್ಲಿ ನಿಖಿಲ್ ಗೆಲುವು ಅಷ್ಟು ಸುಲಭವಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದ ಇಬ್ಬರು ಸಚಿವರ ಪೈಕಿ ಒಬ್ಬರ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ತಮ್ಮದೇ ಆದ ಸಮೀಕ್ಷೆ ನಡೆಸಿದ್ದು. ಅದರಲ್ಲಿ ಮಂಡ್ಯದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಯಾವ ಯಾವ ಕ್ಷೇತ್ರದಿಂದ ನಿಖಿಲ್ ಎಷ್ಟು ಮತಗಳ ಲೀಡ್​ ಸಿಗಲಿದೆ ಎಂದು ಅಂದಾಜಿಸಲಾಗಿದೆ.

ಸಮೀಕ್ಷೆಯ ಪ್ರಕಾರ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಪ್ರತಿನಿಧಿಸುವ ಮದ್ದೂರು ಹಾಗೂ ಸಣ್ಣ ನೀರಾವರಿ ಸಚಿವ ಪುಟ್ಟರಾಜು ಪ್ರತಿನಿಧಿಸುವ ಮೇಲುಕೋಟೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್​ ಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.ಒಂದು ವೇಳೆ ಫಲಿತಾಂಶದ ನಂತರ ಈ ಎರಡು ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರದಲ್ಲಿ ನಿಖಿಲ್​ಗೆ ಕಡಿಮೆ ಅಂತರದ ಲೀಡ್ ಸಿಗುತ್ತದೆಯೋ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ಇನ್ನೂ ಅಕಸ್ಮಾತ್ ಮಂಡ್ಯದಲ್ಲಿ ನಿಖಿಲ್ ಸೋತರೆ ಮಂಡ್ಯ ಚುನಾವಣೆ ಉಸ್ತುವಾರಿ ವಹಿಸಿದ್ದ ಪುಟ್ಟರಾಜು ಸೋಲಿನ ಹೊಣೆಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತ.

ಇದಲ್ಲದೆ, ಸಚಿವ ಪುಟ್ಟರಾಜು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜೊತೆ ಉತ್ತಮ ಸಂಬಂಧ ಹೊಂದಿದ್ದರು ಮಾಜಿ ಪ್ರಧಾನಿ ದೇವೇಗೌಡರ ಬಳಿ ಅವರ ಸಂಬಂಧ ಅಷ್ಟಾಗಿ ಸರಿ ಇಲ್ಲ. ಅಲ್ಲದೆ ಮತ್ತೊಬ್ಬ ಸಚಿವ ಡಿ.ಸಿ. ತಮ್ಮಣ್ಣ ದೇವೇಗೌಡರ ಬೀಗರಾಗಿರುವ ಕಾರಣ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಕಡಿಮೆ. ಹೀಗಾಗಿ ಸಂಪುಟ ಪುನರ್​ ರಚನೆ ನಂತರ ಸಚಿವ ಪುಟ್ಟರಾಜು ತಮ್ಮ ಸಚಿವ ಸ್ಥಾನವನ್ನು ತೊರೆಯುವುದು ಬಹುತೇಕ ಖಚಿತವಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಲೋಕಸಭೆ ಫಲಿತಾಂಶ ನಿರ್ಧರಿಸಲಿದೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...