ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಕೆಲಸಗಾರ ಮೋದಿಯವರನ್ನು ಗೆಲ್ಲಿಸಿದ್ದಾರೆ. ನಿದ್ರೆ ಮಾಡುವ ಸಿದ್ದರಾಮಯ್ಯರನ್ನು ಮನೆಗೆ ಕಳುಹಿಸಿದ್ದಾರೆ. 5 ವರ್ಷ ನಿದ್ದೆರಾಮಯ್ಯರಾಗಿದ್ದ ಸಿದ್ದರಾಮಯ್ಯ ಏನು ಕೆಲಸ ಮಾಡಿದ್ದಾರೆ? ಎಂದು ಪ್ರಶ್ನಿಸಿದರು.
ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳಿಕೊಂಡು ಜೆಡಿಎಸ್-ಕಾಂಗ್ರೆಸ್ ಒಂದಾದ್ರಿ, ಅಂಬೇಡ್ಕರ್ ಅವರನ್ನೇ ಕಾಂಗ್ರೆಸ್ ನವರು ಎರಡು ಬಾರಿ ಸೋಲಿಸಿದ್ರು, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪರವನ್ನು ಬಿಡುತ್ತೀರಾ ಎಂದು ದೇವೇಗೌಡರೇ ಹೇಳಿದ್ದಾರೆ.ಕಾಂಗ್ರೆಸ್, ಜೆಡಿಎಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ, ದೇವೇಗೌಡ ಮತ್ತು ಕಾಂಗ್ರೆಸ್ ಶಾಸಕರಲ್ಲೇ ಭಿನ್ನಮತವಿದೆ ಎಂದರು.