ನನ್ನ ಕ್ಷೇತ್ರದಲ್ಲಿ 55 ರಿಂದ 60 ಸಾವಿರ ಮುಸ್ಲಿಮರ ವೋಟ್‌ಗಳಿವೆ. ಇದೂವರೆಗೂ ಒಬ್ಬ ಮುಸ್ಲಿಮನಿಗೂ ನಮಸ್ಕಾರ ಹೊಡೆದು ವೋಟ್ ಕೇಳಿಲ್ಲ. ನನಗೆ ಅದರ ಅವಶ್ಯಕತೆ ಇಲ್ಲ ಹಾಗು ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡವನು ನಾನಲ್ಲ. ನಿಮ್ಮ ಮೇಲೆ ಅತ್ಯಾಚಾರ ನಡೆದರೆ ಸರಕಾರ ಏನು ಮಾಡೋಕಾಗುತ್ತೆ ಎಂದು ವರದಿಗಾರ್ತಿಗೆ ಪೆಕರನಂತೆ ಪ್ರಶ್ನಿಸಿದವನು ನಾನಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಗೆ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಹೇಗೆ ರಾಜಕೀಯದಲ್ಲಿ ಒಬ್ಬರಮೇಲೊಬ್ಬರು ವಾಗ್ದಾಳಿ ನೆಡೆಸುವುದು ಹೊಸದೇನಲ್ಲ ಇದು ಟ್ವೀಟ್ ನಲ್ಲಿ ಒಬ್ಬರ ನಂತರ ಒಬ್ಬರು ತಮಗನಿಸಿದ್ದನು ಹೇಳಿದ್ದಾರೆ. ಇನ್ನು ಈ ಹೇಳಿಕೆಯಲ್ಲಿ ಬೇರೆ ಬೇರೆ ಅರ್ಥ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದೆ.