ನಿಮ್ಮ ಹಲವು ಆರೋಗ್ಯ ಸಮಸ್ಯೆಗಳಿಗೆ ನುಗ್ಗೆ ಸೊಪ್ಪಿನಲ್ಲಿದೆ ಪರಿಹಾರ

Date:

ನಿಮ್ಮ ಹಲವು ಆರೋಗ್ಯ ಸಮಸ್ಯೆಗಳಿಗೆ ನುಗ್ಗೆ ಸೊಪ್ಪಿನಲ್ಲಿದೆ ಪರಿಹಾರ

 

ಸಾಂಬಾರ್ ನಲ್ಲಿ ನುಗ್ಗೆಕಾಯಿ ಇದ್ದರೆ ಅದರ ರುಚಿಯೇ ಬೇರೆ. ನುಗ್ಗೆಕಾಯಿ ಹಲವು ಆರೋಗ್ಯಕರ ಅಂಶಗಳನ್ನು ಒಳಗೊಂಡಿದೆ. ನುಗ್ಗೆ ಸೊಪ್ಪಿನಲ್ಲಿ, ಪ್ರೋಟೀನ್, ಕ್ಯಾಲ್ಸಿಯಂ, 8 ಅಮಿನೋ ಆಮ್ಲಗಳು, ಕಬ್ಬಿಣಾಂಶ, ವಿಟಮಿಮ್ ಸಿ, ಎ ಮತ್ತು ಮಿನರಲ್‍ಗಳಿವೆ. ಆ್ಯಂಟಿಫಂಗಲ್, ಆ್ಯಂಟಿವೈರಲ್, ಆ್ಯಂಟಿಡಿಪ್ರೆಸೆಂಟ್ ಮತ್ತು ಆ್ಯಂಟಿ- ಇನ್‍ಫ್ಲಮೇಟರಿ ಅಂಶಗಳನ್ನು ಹೊಂದಿರುವ ನುಗ್ಗೆ ಸೊಪ್ಪು ಔಷಧೀಯ ಗುಣಗಳ ಆಗರ. ನುಗ್ಗೆ ಮರದ ಪ್ರತಿಯೊಂದು ಭಾಗವು ಆರೋಗ್ಯಕ್ಕೆ ಉಪಯೋಗವಾಗುವ ಅಂಶಗಳನ್ನು ಹೊಂದಿದೆ.

ರೋಗನಿರೋಧಕ ಶಕ್ತಿ ಹೆಚ್ಚಳ

ಇದರಲ್ಲಿ ವಿಟಮಿನ್‌ ಸಿ ಪ್ರಮಾಣ ಹೆಚ್ಚಿದೆ. ಅಂದಾಜಿಗೆ ಹೇಳುವುದಾದರೆ, ಕಿತ್ತಳೆ ಹಣ್ಣುಗಳಲ್ಲಿ ಇರುವ ಪ್ರಮಾಣಕ್ಕಿಂತಲೂ ನುಗ್ಗೆ ಸೊಪ್ಪಿನಲ್ಲಿ ಹೆಚ್ಚು ಸಿ ಜೀವಸತ್ವವಿದೆ. ಹಾಗಾಗಿ ಸೋಂಕುಗಳನ್ನು ದೂರ ಮಾಡಲು, ಒಂದೊಮ್ಮೆ ಋತುಮಾನದ ವೈರಸ್‌ಗಳು ಕಾಡಿದರೂ ಬೇಗ ಚೇತರಿಸಿಕೊಳ್ಳಲು ಇದರ ನಿಯಮಿತ ಸೇವನೆಯಿಂದ ಸಾಧ್ಯವಾಗುತ್ತದೆ.

ತೂಕ ಇಳಿಸಲು ನೆರವು

ಕಡಿಮೆ ಕ್ಯಾಲರಿಯಲ್ಲಿ ಹೆಚ್ಚಿನ ಪೋಷಕಾಂಶಗಳನ್ನು ನೀಡುವಂಥ ಆಹಾರಗಳು ತೂಕ ಇಳಿಸಿಕೊಳ್ಳಲು ಸೂಕ್ತವಾದಂಥವು. ಜೊತೆಗೆ ಹೇರಳವಾದಂಥ ನಾರು ಮತ್ತು ಪ್ರೊಟೀನ್‌ ಅಂಶಗಳಿದ್ದ ಆಹಾರದಿಂದ ಹೊಟ್ಟೆ ತುಂಬುವುದು ಬೇಗ, ಕಳ್ಳ ಹಸಿವಿನ ಕಾಟವೂ ಇಲ್ಲ. ಈ ಎಲ್ಲ ಗುಣಗಳನ್ನು ಹೊಂದಿರುವ ನುಗ್ಗೆ ಸೊಪ್ಪು ತೂಕ ಇಳಿಸಿಕೊಳ್ಳುವವರಿಗೆ ಪ್ರಯೋಜನಕಾರಿ.

ಮಧುಮೇಹಿಗಳಿಗೆ ಒಳ್ಳೆಯದು

ನಾರು ಮತ್ತು ಪ್ರೊಟೀನ್‌ ಹೆಚ್ಚಿರುವ ಆಹಾರಗಳು ಮಧುಮೇಹಿಗಳಿಗೆ ಪೂರಕ, ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಸ್ಥಿರವಾಗಿರುತ್ತದೆ ಎನ್ನುವುದನ್ನು ಅಧ‍್ಯಯನಗಳು ತಿಳಿಸುತ್ತವೆ. ಇದರ ಜೊತೆಗೆ, ನುಗ್ಗೆಯಲ್ಲಿರುವ ಐಸೊಥಿಯೊಸಯನೇಟ್‌ ಎಂಬ ನೈಸರ್ಗಿಕ ಉತ್ಕರ್ಷಣ ನಿರೋಧಕಗಳು ರಕ್ತದಲ್ಲಿ ಸಕ್ಕರೆಯಂಶ ಏರಿಳಿತ ಆಗದಂತೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪಾಲಿಫೆನಾಲ್‌ ಅಂಶಗಳೂ ಇದರಲ್ಲಿ ಇರುವುದರಿಂದ ಯಕೃತ್ತಿನ ಆರೋಗ್ಯ ರಕ್ಷಣೆ ಮಾಡುವುದು ಕಷ್ಟವಲ್ಲ.

ಎಷ್ಟು ಸೇವಿಸಬೇಕು?

ಶರೀರಕ್ಕೆ ಯಾವುದಾದರೂ ಸತ್ವ ಅತಿಯಾದರೂ ಜೀರ್ಣಿಸಿಕೊಳ್ಳುವುದು ಕೆಲವೊಮ್ಮೆ ಕಷ್ಟವಾಗಬಹುದು. ಹಾಗಾಗಿ ನುಗ್ಗೆ ಸೊಪ್ಪು ಒಳ್ಳೆಯದು ಎನ್ನುವುದು ನಿಜ. ಆದರೆ ಅದನ್ನು ಎಷ್ಟು ಸೇವಿಸಬೇಕು? ಎಷ್ಟು ತಿಂದರೆ ದೇಹ ತೆಗೆದುಕೊಳ್ಳಬಲ್ಲದು? ನುಗ್ಗೆ ಸೊಪ್ಪಿನ ಪುಡಿಯನ್ನು (ಮೊರಿಂಗ ಪೌಡರ್‌) ಸೇವಿಸುವ ಅ‍ಭ್ಯಾಸವಿದ್ದರೆ ದಿನಕ್ಕೆ ಒಂದು ದೊಡ್ಡ ಚಮಚ ಸಾಕಾಗುತ್ತದೆ. ಇದರಿಂದ, ಅಂದಾಜಿಗೆ ಹೇಳುವುದಾದರೆ, 35 ಕ್ಯಾಲರಿ ಶಕ್ತಿ ದೊರೆಯುತ್ತದೆ. ಅದಿಲ್ಲದಿದ್ದರೆ, ಒಂದು ದೊಡ್ಡ ಮುಷ್ಟಿಯಷ್ಟು ಹಸಿ ಸೊಪ್ಪು ಸೇವನೆಯಿಂದ ಈ ಅಭ್ಯಾಸವನ್ನು ಪ್ರಾರಂಭಿಸಬಹುದು. ಗರ್ಭಿಣಿಯರು ಸ್ವಲ್ಪ ತಿಂದರೆ ತೊಂದರೆಯಿಲ್ಲ, ಆದರೆ ಅತಿಯಾಗಿ ತಿನ್ನುವುದು ಸಮಸ್ಯೆಗಳನ್ನು ತರಬಹುದು.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...