ಬೆಂಗಳೂರು: ವರದಕ್ಷಿಣ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಮ್ಮನ ಗುಡಿ ಮುಖ್ಯ ರಸ್ತೆ ಮನೆಯಲ್ಲಿ ನಡೆದಿದೆ. 22 ವರ್ಷದ ಪೂಜಾ ಆತ್ಮಹತ್ಯೆ ಶರಣಾದ ವಿವಾಹಿತೆಯಾಗಿದ್ದು, ಪೂಜಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು.
ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಘಟನೆ ಸಂಬಂಧ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಲ್ಲದ ವರದಕ್ಷಿಣೆ ಕಿರುಕುಳ- ಟೆಕ್ಕಿ ಸಾವು !
Date: