ನೀವು ಬೆಳ್ಳಿ ಉಂಗುರ ಹಾಕ್ತೀರಾ!? ಇದರಿಂದ ಆಗುವ ಲಾಭಗಳೆಷ್ಟು ಗೊತ್ತಾ!?
ಜನರು ಬೆಳ್ಳಿಯ ಉಂಗುರಗಳನ್ನು ಧರಿಸುವುದನ್ನು ನೀವು ನೋಡಿರಬಹುದು. ಬೆಳ್ಳಿಯ ಉಂಗುರಗಳನ್ನು ಧರಿಸುವುದರಿಂದ ಅನೇಕ ಪ್ರಯೋಜನಗಳಿವೆ. ಇದನ್ನು ನಿಮ್ಮ ಕೈಯಲ್ಲಿ ಧರಿಸಿದರೆ ಅದೃಷ್ಟವೇ ಬದಲಾಗುತ್ತದೆ ಎಂದೆಲ್ಲಾ ಹೇಳಲಾಗುತ್ತದೆ. ಹುಡುಗಿಯರು ಮತ್ತು ಮಹಿಳೆಯರಿಗೆ ಎಡಗೈಯಲ್ಲಿ ಮತ್ತು ಹುಡುಗರು ಮತ್ತು ಪುರುಷರಿಗೆ ಬಲಗೈಯಲ್ಲಿ ಬೆಳ್ಳಿಯ ಉಂಗುರವನ್ನು ಧರಿಸುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಯಾವುದೇ ವ್ಯಕ್ತಿ ಇದನ್ನು ಧರಿಸುವುದರಿಂದ ತಾಯಿ ಲಕ್ಷ್ಮಿದೇವಿಯ ಆಶೀರ್ವಾದ ಪಡೆಯುತ್ತಾನೆ. ಜೊತೆಗೆ ಆತನ ಜೀವನವು ಸಂತೋಷ, ಸೌಕರ್ಯ ಮತ್ತು ಸಂಪತ್ತಿನಿಂದ ಕೂಡಿರುತ್ತದೆಂದು ಹೇಳಲಾಗಿದೆ.
ಒಬ್ಬ ಮನುಷ್ಯ ಆರೋಗ್ಯವಾಗಿರಬೇಕಂದ್ರೆ ರೋಗನಿರೋಧಕ ಶಕ್ತಿ ಹೆಚ್ಚಿರಬೇಕು. ರೋಗನಿರೋಧಕ ಶಕ್ತಿ ಕಡಿಮೆಯಾದರೆ ಕೆಮ್ಮು, ನೆಗಡಿ, ಕಾಲೋಚಿತ ರೋಗಗಳ ಜೊತೆಗೆ ಹಲವು ರೋಗಗಳು ನಮ್ಮ ದೇಹವನ್ನು ಅಂಟಿಕೊಳ್ಳುತ್ತದೆ.
ಆದರೆ ಬೆಳ್ಳಿಯ ಉಂಗುರಗಳನ್ನು ಧರಿಸುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು. ಅನೇಕ ಜನರು ಈ ಬಗ್ಗೆ ಗೊತ್ತಿಲ್ಲದಿದ್ದರೂ ಬೆಳ್ಳಿಯ ಉಂಗುರಗಳನ್ನು ಧರಿಸುತ್ತಾರೆ.
ಬೆಳ್ಳಿಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಆದ್ದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ನಿಮ್ಮನ್ನು ಸೋಂಕುಗಳಿಂದ ದೂರವಿಡುತ್ತದೆ. ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ.
ನಮ್ಮ ದೇಹದಲ್ಲಿ ರಕ್ತ ಪರಿಚಲನೆ ಉತ್ತಮವಾಗಿದ್ದರೆ ನಾವು ಎಲ್ಲ ರೀತಿಯಲ್ಲೂ ಆರೋಗ್ಯವಾಗಿರುತ್ತೇವೆ. ಆದರೆ ಬೆಳ್ಳಿಯು ನಮ್ಮ ದೇಹದಲ್ಲಿ ರಕ್ತ ಸಂಚಾರವನ್ನು ಸುಧಾರಿಸಲು ತುಂಬಾ ಒಳ್ಳೆಯದು ಎಂದು ಹೇಳಲಾಗಿದೆ.
ಬೆಳ್ಳಿಯ ಉಂಗುರ ಆರೋಗ್ಯದ ವಿಷಯದಲ್ಲಿ ತುಂಬಾನೇ ಪ್ರಯೋಜನವನ್ನು ನೀಡುತ್ತದೆ. ಇದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಇದು ಪ್ರಯೋಜನಕಾರಿ.
ಮಾನಸಿಕ ಆರೋಗ್ಯ ಹಾಳಾದರೆ ದೈಹಿಕ ಆರೋಗ್ಯವೂ ಹಾಳಾಗುತ್ತದೆ. ಆದರೆ ಬೆಳ್ಳಿ ನಮ್ಮ ಮಾನಸಿಕ ಆರೋಗ್ಯವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ.
ಇನ್ನು ಬೆಳ್ಳಿಯ ಉಂಗುರ ಧರಿಸಿದ್ರೆ ಮನಸ್ಸನ್ನು ಶಾಂತಗೊಳಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಜೊತೆಗೆ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಮನಸ್ಸನ್ನು ಶಾಂತಗೊಳಿಸುತ್ತದೆ.