ನುಡಿದಂತೆ ನಡೆದ ಜಗ್ಗೇಶ್ ; ನಿರ್ಭಯಾ ಹಂತಕರ ಹ್ಯಾಂಗ್​ಮನ್​ಗೆ 1 ಲಕ್ಷ ರೂ!

Date:

2012ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರು ಮಂದಿ ಅಪರಾಧಿಗಳಲ್ಲಿ 2013ರಲ್ಲಿ ರಾಮ್​ಸಿಂಗ್ ಎಂಬ ಅಪರಾಧಿ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರೆ, ಇನ್ನೊಬ್ಬ ಅಪರಾಧಿ ಕೃತ್ಯ ನಡೆದಾಗ ಅಪ್ರಾಪ್ತನಾಗಿದ್ದರಿಂದ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ. ಉಳಿದ ನಾಲ್ವರಿಗೆ ಗಲ್ಲು ಶಿಕ್ಷೆ ಆಗಿತ್ತು. ಪದೇ ಪದೇ ಕಾನೂನು ಜೊತೆ ಆಟವಾಡುತ್ತಾ 3 ಬಾರಿ ನೇಣು ಕುಣುಕೆಯಿಂದ ಬಚಾವಾಗಿದ್ದ ಆ ನಾಲ್ವರಿಗೆ ಇಂದು ಗಲ್ಲು ಶಿಕ್ಷೆಯಾಗಿದೆ.
ತಿಹಾರ್ ಜೈಲಿನಲ್ಲಿ ವಿನಯ್ ಕುಮಾರ್, ಅಕ್ಷಯ್ ಠಾಕೂರ್ ಮತ್ತು ಮುಕೇಶ್ ಸಿಂಗ್ ಹಾಗೂ ಪವನ್ ಗುಪ್ತಾಗೆ ಇಂದು ಬೆಳಗ್ಗೆ 5.30ಕ್ಕೆಗಲ್ಲು ಶಿಕ್ಷೆಯಾಗಿದೆ. ಅತ್ಯಾಚಾರಿಗಳಿಗೆ ಗಲ್ಲಾಗಿರುವುದರಿಂದ ಇಡೀ ದೇಶ ಸಂಭ್ರಮಿಸುತ್ತಿದೆ. ಜನ ಪಠಾಕಿ ಹಚ್ಚಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ನಟ ಜಗ್ಗೇಶ್ ಆ ಅತ್ಯಾಚಾರಿಗಳಿಗೆ 1 ಲಕ್ಷ ರೂ ನೀಡಿದ್ದಾರೆ. ತಾವು ಹ್ಯಾಂಗ್​​ಮನ್​ ಪವನ್​ಗೆ 1 ಲಕ್ಷ ರೂ ಕೊಡುವುದಾಗಿ ಈ ಹಿಂದೆಯೇ ಜಗ್ಗೇಶ್ ಘೋಷಿಸಿದ್ದರು. ಅಂತೆಯೇ ಚೆಕ್ ನೀಡಿದ್ದಾರೆ.
“ಕೊಟ್ಟ ಮಾತಿನಂತೆ 1 ಲಕ್ಷ ರೂ, ನಿರ್ಭಯ ಹಂತಕರ #hangmen ಗೆ ನನ್ನ ಧೇಣಿಗೆ..ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ! ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲ.! ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲ! ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ! ಸುದ್ದಿ ಕೇಳಲು ನಿದ್ರೆಮಾಡದೆ ಕಾದೆ! ಹರಿಓಂ. ಶುಭದಿನ” ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...