ನೂತನ ದಾಖಲೆ ಬರೆದ ಇಶಾನ್ ಕಿಶನ್

Date:

ಶಾರ್ಜಾ: ಮುಂಬೈ ಇಂಡಿಯನ್ಸ್ ಆರಂಭಿಕ ಬ್ಯಾಟ್ಸ್‌ಮನ್‌ ಇಶಾನ್ ಕಿಶನ್ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌)ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಮುಂಬೈ ಪರ ಐಪಿಎಲ್‌ನಲ್ಲಿ 1000 ರನ್ ಮೈಲಿಗಲ್ಲು ಕಿಶನ್ ನಿರ್ಮಿಸಿದ್ದಾರೆ. ಮಂಗಳವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಿಶನ್ ಈ ದಾಖಲೆ ಬರೆದರು.

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ (ಅಕ್ಟೋಬರ್ 5) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಲ್ಲಿ ಇಶಾನ್ ಕಿಶನ್ ಈ ಸಾಧನೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಕಿಶನ್ ಸ್ಫೋಟಕ ಅರ್ಧ ಶತಕ ಬಾರಿಸಿದ್ದಾರೆ. 60 ಐಪಿಎಲ್ ಪಂದ್ಯಗಳಲ್ಲಿ ಕಿಶನ್ 27.36ರ ಸರಾಸರಿಯಲ್ಲಿ 1368 ರನ್ ದಾಖಲೆ ಹೊಂದಿದ್ದಾರೆ.

ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದ ಕಿಶನ್, 25 ಎಸೆತಗಳಲ್ಲಿ 50 ರನ್ ಪೂರೈಸಿದ್ದಾರೆ. ಇದರಲ್ಲಿ 5 ಫೋರ್ಸ್, 3 ಸಿಕ್ಸರ್ ಕೂಡ ಸೇರಿತ್ತು. ಕಿಶನ್ ಅದ್ಭುತ ಬ್ಯಾಟಿಂಗ್ ಮತ್ತು ನೇಥನ್ ಕೌಲ್ಟರ್ ನೈಲ್ ಮತ್ತು ಜೇಮ್ಸ್ ನೀಶನ್ ಮಾರಕ ಬೌಲಿಂಗ್ ನೆರವಿನೊಂದಿಗೆ ಮುಂಬೈ 8 ವಿಕೆಟ್ ಜಯ ಗಳಿಸಿತಲ್ಲದೆ ಪ್ಲೇ ಆಫ್ಸ್‌ ಆಸೆ ಜೀವಂತವಾಗಿರಿಸಿಕೊಂಡಿದೆ.

 

 

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...