No menu items!
12.4 C
Munich
Wednesday, April 29, 2026

ನೂತನ ದಾಖಲೆ ಬರೆದ ಕೊರೊನಾವೈರಸ್

Must read

ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 201 ದಿನಗಳ ಬಳಿಕ ದಾಖಲೆಯ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 20,000ಕ್ಕಿಂತಲೂ ಕಡಿಮೆ ಸೋಂಕಿತ ಪ್ರಕರಣಗಳು ವರದಿಯಾಗಿವೆ.

 

ಕಳೆದ 24 ಗಂಟೆಗಳಲ್ಲಿ 18,795 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 179 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 26,030 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,36,97,581ಕ್ಕೆ ಏರಿಕೆಯಾಗಿದೆ. ಇದುವರೆಗೂ 32,9,58,002 ಸೋಂಕಿತರು ಗುಣಮುಖರಾಗಿದ್ದು, 4,47,373 ಜನರು ಸೋಂಕಿನಿಂದ ಸಾವಿನ ಮನೆ ಸೇರಿದ್ದಾರೆ. ಇದರ ಹೊರತಾಗಿ ದೇಶದಲ್ಲಿ 2,92,206 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ ಹೆಚ್ಚಳವಾಗುತ್ತಿದ್ದಂತೆ ಹೊಸ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 13,21,780 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 56,57,30,031 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

 

 

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article