ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಂಪುಟ ಸೇರಲಿರುವವರ ಪಟ್ಟಿ ಸಿದ್ದವಾಗಿದೆ. ಇಂದು ಸಂಜೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ಪ್ಯಾಲೆಸ್ ಗ್ರೌಂಡ್ ನಲ್ಲಿ ನೆಡೆದಿದ್ದು , 7 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರೆ
ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್, ಬಾಗಲಕೋಟೆ ಜಿಲ್ಲೆ ಬೀಳಗಿ ಶಾಸಕ ಮುರುಗೇಶ್ ನಿರಾಣಿ, ಪರಿಷತ್ ಸದಸ್ಯರಾದ ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಶಾಸಕ ಎಸ್.ಅಂಗಾರ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕಾಂಗ್ರೆಸ್ ನಿಂದ ಬಿಜೆಪಿ ಗೆ ಬಂದಿದ್ದ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಈ ಬಾರಿ ಅವಕಾಶ ಸಿಕ್ಕಿಲ್ಲ. ವರಿಷ್ಠರ ಸೂಚನೆ ಮೇರೆಗೆ ಮುನಿರತ್ನ ಅವರಿಗೆ ಈ ಬಾರಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿಲ್ಲ ಎನ್ನಲಾಗಿದೆ.ಮುಂಬೈ ಕರ್ನಾಟಕ ಭಾಗದಿಂದ ಪ್ರಬಲ ವೀರಶೈವ ಸಮುದಾಯಕ್ಕೆ ಸೇರಿದ ಹಿರಿಯ ಮುಖಂಡ ಉಮೇಶ್ ಕತ್ತಿ, ಕಲ್ಯಾಣ ಕರ್ನಾಟಕ ಭಾಗದಿಂದ ಪಂಚಮಸಾಲಿಯ ಪ್ರಭಾವಿ ನಾಯಕ ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ನೀಡಲಾಗಿದೆ.
ನಾಯಕತ್ವದ ವಿರುದ್ಧ ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿದ್ದ ಬಸವನಗೌಡ ಪಾಟೀಲ್ ಯತ್ನಾಳ್‍ಗೆ ಪರ್ಯಾಯವಾಗಿ ನಿರಾಣಿಯನ್ನು ಸಂಪುಟಕ್ಕೆ ತೆಗೆದುಕೊಂಡು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರ ಬಿಎಸ್‍ವೈ ಅವರದ್ದಾಗಿದೆ ಎಂದು ಹೇಳಲಾಗುತ್ತಿದೆ.