ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕೊನೆಗೂ ಕೇಂದ್ರ ಸರ್ಕಾರ 1200 ಕೋಟಿ ರೂ. ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ರಾಜ್ಯದ ಸಂಸದರು ಕೇಂದ್ರ ಸಚಿವರಿಗೆ ಒತ್ತಾಯಿಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯವನ್ನು ಪ್ರತಿನಿಧಿಸುತ್ತಿದ್ದು, ಅವರಿಗೂ ಪರಿಹಾರಕ್ಕಾಗಿ ಒತ್ತಾಯಿಸಲಾಗಿತ್ತು. ಅಂತೆಯೇ ಎನ್.ಡಿ.ಆರ್.ಎಫ್.ನಿಧಿಯ ಮೂಲಕ ರಾಜ್ಯಕ್ಕೆ 1200 ಕೋಟಿ ರೂ. ಬಿಡುಗಡೆ ಮಾಡಲು ಗೃಹಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ. ನಂತರದಲ್ಲಿ ರಾಜ್ಯ ಸರ್ಕಾರದ ಪ್ರಸ್ತಾವನೆ ಆಧರಿಸಿ ಹಂತ ಹಂತವಾಗಿ ಪರಿಹಾರದ ಹಣ ಬಿಡುಗಡೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎನ್ನಲಾಗುತ್ತಿದೆ .