ರಾಜ್ಯದಲ್ಲಿ ನೆರೆ ಮತ್ತು ಬರ ಪರಿಸ್ಥಿತಿಯಿಂದ ಜನ ಸಂಕಷ್ಟದಲ್ಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ. ಕೇಂದ್ರ ಸರ್ಕಾರ 1200 ಕೋಟಿ ರೂ. ಮಧ್ಯಂತರ ಪರಿಹಾರ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪ್ರವಾಹದ ಸಂದರ್ಭದಲ್ಲಿ ಗೋಲ್ಮಾಲ್ ಹೆಚ್ಚಾಗಿ ನಡೆಯುತ್ತವೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬಿಜೆಪಿ ಸರ್ಕಾರ ನೆರೆಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರದ ಹಣ ಪಾವತಿಸಲಿದೆ ಎಂದು ಹೇಳಿದ್ದಾರೆ ಆ ಹಣ ನೇರವಾಗಿ ನೆರೆ ಸಂತ್ರಸ್ತರಿಗೆ ತಲುಪಬೇಕೆಂಬ ಉದ್ದೇಶ ನಮ್ಮದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ .