ನೇಣು ಬಿಗಿದುಕೊಂಡು ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಪುತ್ರ ಆತ್ಮಹತ್ಯೆ!
ತುಮಕೂರು: ನೇಣು ಬಿಗಿದುಕೊಂಡು ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಅವರ ಪುತ್ರ ಆತ್ಮಹತ್ಯೆಗೆ ಶರಣಾರುವ ಘಟನೆ ತುಮಕೂರಿನ ವಿಜಯನಗರದಲ್ಲಿ ಜರುಗಿದೆ. ತ್ರಿಶಾಲ್ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ 7 ನೇ ತರಗತಿಯಲ್ಲಿ ಓದುತ್ತಿದ್ದನು.
ತ್ರಿಶಾಲ್ ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.