ನೇಹಾ ಹತ್ಯೆ ಪ್ರಕರಣ: ಇಂದು ರಾಜ್ಯದಾದ್ಯಂತ ಪ್ರತಿಭಟನೆ

0
12

ಧಾರವಾಡ: ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ ಇಂದು ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಾಗುತ್ತದೆ. ಅಲ್ಲದೇ ಆರೋಪಿ ಪರ ಮುಸ್ಲಿಂ ವಕೀಲರು ವಾದ ಮಾಡಲ್ಲ ಅಂತ ಹೇಳಿದ್ದಾರೆ. ಅಲ್ಲದೇ ನೇಹಾ ಹತ್ಯೆ ಖಂಡಿಸಿ ಇಂದು ಮುಸ್ಲಿಂ ಸಮುದಾಯ ಧಾರವಾಡದಲ್ಲಿ ಅರ್ಧ ದಿನ ಸ್ವಯಂ ಪ್ರೇರಿತ ಬಂದ್‌ಗೆ ಕರೆ ಕೊಟ್ಟಿದೆ.
ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ನಿನ್ನೆ ನೇಹಾ ಮನೆಗೆ ಭೇಟಿ ಕೊಟ್ಟ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನೇಹಾ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದರು. ಬಳಿಕ ಮಾತ್ನಾಡಿದ ಅವರು, ರಾಜ್ಯ ಪೊಲೀಸರ ಮೇಲೆ ಭರವಸೆ ಇಲ್ಲ. ತನಿಖೆಯ ಹಾದಿ ಬದಲಾಗ್ತಿದೆ. ಸಿಬಿಐನಿಂದ ತನಿಖೆ ಆಗ್ಬೇಕು ಅಂತ ಆಗ್ರಹಿಸಿದ್ದಾರೆ.
ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಭಾರಿ ಸದ್ದು ಮಾಡ್ತಿದೆ. ಘಟನೆ ಖಂಡಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ ಮಾಡಲಿದೆ. ಬೆಳಗ್ಗೆ 10 ಗಂಟೆಯಿಂದ ಪ್ರೊಟೆಸ್ಟ್ ಮಾಡಲು ಮುಂದಾಗಿದೆ. ಲೋಕ ಸಮರದ ಹೊಸ್ತಿಲಲ್ಲಿ ಕಾಂಗ್ರೆಸ್ ವಿರುದ್ಧ ಹುಬ್ಬಳ್ಳಿಯ ನೇಹಾ ಹತ್ಯೆಯನ್ನ ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಬಿಜೆಪ ಮುಂದಾಗಿರುವ ಬಿಜೆಪಿ, ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.