ನೈಟ್ ಕರ್ಫ್ಯೂ ಬಗ್ಗೆ ಗೃಹಸಚಿವರು ಹೇಳಿದ್ದೇನು?

Date:

ರಾಜ್ಯದಲ್ಲಿ ಕೋವಿಡ್‌ 19 ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲೂ ಕರ್ಫ್ಯೂ ಅಥವಾ ನೈಟ್ ಕರ್ಫ್ಯೂ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಸೋಮವಾರ ಕೋವಿಡ್‌ ನಿಯಂತ್ರಣ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಆದರೆ ನೈಟ್‌ ಕರ್ಫ್ಯೂ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಸಿ.ಡಿ ವಿಚಾರವಾಗಿ ಸದನದಲ್ಲಿ ಪ್ರಸ್ತಾಪ ಮಾಡುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಡಿ ವಿಚಾರವಾಗಿ ಏನು ಬೇಕಾದರೂ ಮಾತನಾಡಲಿ ಎಂದರು.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ‘ಸಿ.ಡಿ ಪ್ರಕರಣದಲ್ಲಿ ನನ್ನನ್ನು ವ್ಯವಸ್ಥಿತವಾಗಿ ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ. ನಾನು ಹೆದರುವ ಮಗನಲ್ಲ’ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಹೇಳಿಕೆಗೆ ಡಿಕೆ ಶಿವಕುಮಾರ್ ಅವರೇ ವಿವರಣೆ ನೀಡಬೇಕು ಎಂದು ತಿಳಿಸಿದರು.

ಇನ್ನು ಸಿ.ಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿಯ ವಿಡಿಯೋ ಹಿನ್ನೆಲೆಯಲ್ಲಿ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಲು ಹೇಳಿದ್ದೇನೆ, ತನಿಖೆ ವಿಚಾರ ಎಸ್‌ಐಟಿ ನೋಡಿಕೊಳ್ಳುತ್ತಿದೆ ಎಂದರು.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...