ತೀಸ್ ಹಜಾರಿ ನ್ಯಾಯಾಲಯದ ಕೊಠಡಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ದಿನಗೂಲಿ ನೌಕರನೊಬ್ಬನ ಮೃತ ದೇಹ ಪತ್ತೆಯಾಗಿದೆ ಎನ್ನಲಾಗಿದೆ. ದೆಹಲಿ ಬಾರ್ ಅಸೋಸಿಯೆಷನ್ ನ ದಿನಗೂಲಿ ನೌಕರನ ಶವ ನ್ಯಾಯಾಲಯದ ನ್ಯಾಯಾಧೀಶರ ಕೊಠಡಿಯ ಒಳಗೆ ಪತ್ತೆಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೃತ ವ್ಯಕ್ತ ಕ್ಷಯ ರೋಗಿಯಾಗಿದ್ದ ಎನ್ನಲಾಗಿದೆ. ಅತೀವ ಮದ್ಯ ವ್ಯಸನಿಯಾಗಿದ್ದ ಎಂದು ತಿಳಿದು ಬಂದಿದೆ. ಕೊಠಡಿಯ ಮೂಲೆಯಲ್ಲಿರುವ ಕಸದ ಬುಟ್ಟಿಯಲ್ಲಿ ಆತ ಸಾಯುವ ಮುನ್ನ ರಕ್ತವಾಂತಿ ಮಾಡಿದ್ದ ಎನ್ನಲಾಗಿದೆ.
ಆದರೆ, ಆತನ ಮೈ ಮೇಲೆ ಯಾವುದೇ ಗಾಯಗಳಾಗಿಲ್ಲ ಎಂದು ಉತ್ತರ ವಲಯದ ಡಿಸಿಪಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ.